ದೇಶ

ಸಂಬಿತ್ ಪಾತ್ರ ಅವರ ರಾಷ್ಟ್ರಪಿತ ಹೇಳಿಕೆಗೆ ಪ್ರಧಾನಿ ಮೋದಿ ಕ್ಷಮೆ ಯಾಚಿಸಬೇಕು

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪಿತ ಎಂಬ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಹೇಳಿಕೆಯಿಂದ ಮಹಾತ್ಮ ಗಾಂಧಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಸಂಬಿತ್ ಪಾತ್ರ ಅವರ ರಾಷ್ಟ್ರಪಿತ ಹೇಳಿಕೆಗೆ ಪ್ರಧಾನಿ ಮೋದಿ ಕ್ಷಮೆ ಯಾಚಿಸಬೇಕು
ನರೇಂದ್ರ ಮೋದಿ
Published On :
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪಿತ ಎಂಬ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರ ಹೇಳಿಕೆಯಿಂದ ಮಹಾತ್ಮ ಗಾಂಧಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. 
ಸಂಬಿತ್ ಪಾತ್ರ ಅವರ ಹೇಳಿಕೆಯಿಂದ ಗಾಂಧಿಗೆ ಅವಮಾನವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯ ಕ್ಷಮೆ ಯಾಚಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಕ್ಷಮೆ ಕೇಳುವುದರೊಂದಿಗೆ, ಕಾಂಗ್ರೆಸ್ ಮಣಿಶಂಕರ್ ಅಯ್ಯರ್ ಅವರನ್ನು ಉಚ್ಚಾಟಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂಬಿತ್ ಪಾತ್ರ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕೆಂದು ಆಗ್ರಹಿಸಿದೆ. 
ಸಂಬಿತ್ ಪಾತ್ರ ಅವರ ಹೇಳಿಕೆಯನ್ನು ವಿರೋಧಿಸಿರುವ ರಣ್ದೀಪ್ ಸಿಂಗ್ ಸುರ್ಜೆವಾಲ, ಮಹಾತ್ಮ ಗಾಂಧಿಗೆ ಅವಮಾನವಾಗಿರುವುದನ್ನು ದೇಶದ ಜನತೆ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.