ಹಿಮಪಾತ: ಕಾಶ್ಮೀರದ ಗುರೇಜ್ ಸೆಕ್ಟರ್ ನಲ್ಲಿ ಮೂವರು ಯೋಧರು ನಾಪತ್ತೆ, ಶೋಧ ಕಾರ್ಯ ಆರಂಭ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಚಳಿಗಾಲ ಋತುವಿನ ಮೊದಲ ಹಿಮಪಾತವಾಗಿದ್ದು, ಹಿಮಪಾತವಾದ ಮೊದಲ ದಿನವೇ ಭಾರತೀಯ ಸೇನೆಯ ಮೂವರು ಯೋಧರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಚಳಿಗಾಲ ಋತುವಿನ ಮೊದಲ ಹಿಮಪಾತವಾಗಿದ್ದು, ಹಿಮಪಾತವಾದ ಮೊದಲ ದಿನವೇ ಭಾರತೀಯ ಸೇನೆಯ ಮೂವರು ಯೋಧರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್ ಸೆಕ್ಟರ್ ನಲ್ಲಿ ಪಹರೆ ಕಾಯುತ್ತಿದ್ದ ಮೂವರು ಯೋಧರು ನಾಪತ್ತೆಯಾದ ಕುರಿತು ಸ್ವತಃ ಭಾರತೀಯ ಸೇನಾಧಿಕಾರಿಗಳು ಮಾಹಿತಿ ನೀಡಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ. ಗುರೇಜ್ ಸೆಕ್ಟರ್ ನ ಬಕ್ತೂರ್ ಪೋಸ್ಟ್ ಬಳಿ ಹಿಮಪಾತವಾಗಿದ್ದು, ಭಾರಿ ಹಿಮದ ಗೆಡ್ಡೆಗಳು ಭಾರತೀಯ ಪೋಸ್ಟ್ ಗಳ ಕ್ಯಾಂಪ್ ಮೇಲೆ ಬಿದ್ದಿವೆ. ಪರಿಣಾಮ ಅಲ್ಲಿ ಕರ್ತವ್ಯ ನಿರತರಾಗಿದ್ದ ಮೂವರು ಯೋಧರು ನಾಪತ್ತೆಯಾಗಿದ್ದು, ಪ್ರಸ್ತುತ ನಾಪತ್ತೆಯಾಗಿರುವ ಯೋಧರು ಹಿಮಪಾತದಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸೇನೆಯ ನುರಿತ ತಜ್ಞರು ನಾಪತ್ತೆಯಾಗಿರುವ ಯೋಧರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and Kashmirಭಾರತೀಯ ಸೇನೆavalancheಹಿಮಪಾತHeavy Snowfallಹಿಮಮಳೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


