ಶಾಸಕ, ಸಂಸದರ ವಿರುದ್ಧದ ಕ್ರಿಮಿನಲ್ ಕೇಸ್ ವಿಚಾರಣೆಗಾಗಿ ವಿಶೇಷ ಕೋರ್ಟ್ ಗಳ ಸ್ಥಾಪನೆಗೆ ಕೇಂದ್ರದ ಒಪ್ಪಿಗೆ
ಶಾಸಕರು, ಸಂಸದರ ವಿರುದ್ಧ ಇರುವ ಕ್ರಿಮಿನಲ್ ಕೇಸ್ ಗಳ ವಿಚಾರಣೆಗೆ ವಿಶೇಷ ಕೋರ್ಟ್ ಗಳನ್ನು ಸ್ಥಾಪಿಸುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

Published On :
ನವದೆಹಲಿ: ಶಾಸಕರು, ಸಂಸದರ ವಿರುದ್ಧ ಇರುವ ಕ್ರಿಮಿನಲ್ ಕೇಸ್ ಗಳ ವಿಚಾರಣೆಗೆ ವಿಶೇಷ ಕೋರ್ಟ್ ಗಳನ್ನು ಸ್ಥಾಪಿಸುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಈ ಬಗ್ಗೆ ಸುಪ್ರೀಂ ಕೋರ್ಟ್ ಗೆ ಹೇಳಿಕೆ ನೀಡಿರುವ ಕೇಂದ್ರ ಸರ್ಕಾರ ವಿಶೇಷ ಕೋರ್ಟ್ ಗಳನ್ನು ಸ್ಥಾಪನೆ ಮಾಡುವುದಾಗಿ ತಿಳಿಸಿದೆ. 2014 ರಲ್ಲಿ ಒಟ್ಟು 1,581 ಜನ ಪ್ರತಿನಿಧಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದರು. ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಆರೋಪಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಿಚಾರಣೆ ವಿಳಂಬವಾಗುತ್ತಿರುವುದನ್ನು ವಿಶೇಷ ಕೋರ್ಟ್ ಗಳ ಸ್ಥಾಪನೆ ಮೂಲಕ ತಡೆಯಬಹುದಾಗಿದೆ.
ಪ್ರಾರಂಭದಲ್ಲಿ 12 ವಿಶೇಷ ಕೋರ್ಟ್ ಗಳನ್ನು ಸ್ಥಾಪನೆ ಮಾಡುವುದಾಗಿ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಹೇಳಿದ್ದು, ಇದಕ್ಕಾಗಿ 7.80 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡುವುದಾಗಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


