ದೇಶ

ಸರ್ಕಾರ ಸಾಲ ಮನ್ನಾದ ಹಣ ಜಮೆ ಮಾಡದಿದ್ದರೆ ವಿದ್ಯುತ್ ಬಿಲ್ ಕಟ್ಟಬೇಡಿ: ರೈತರಿಗೆ ಪವಾರ್ ಕರೆ

ಮಹಾರಾಷ್ಟ್ರ ಸರ್ಕಾರ ಸಾಲ ಮನ್ನಾ ಮಾಡಿದ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುವವರೆಗೆ ವಿದ್ಯುತ್ ಬಿಲ್....

ಸರ್ಕಾರ ಸಾಲ ಮನ್ನಾದ ಹಣ ಜಮೆ ಮಾಡದಿದ್ದರೆ ವಿದ್ಯುತ್ ಬಿಲ್ ಕಟ್ಟಬೇಡಿ: ರೈತರಿಗೆ ಪವಾರ್ ಕರೆ
ಶರದ್ ಪವಾರ್
Published On :
ನಾಗ್ಪುರ್: ಮಹಾರಾಷ್ಟ್ರ ಸರ್ಕಾರ ಸಾಲ ಮನ್ನಾ ಮಾಡಿದ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುವವರೆಗೆ ವಿದ್ಯುತ್ ಬಿಲ್ ಸೇರಿದಂತೆ ಇತರೆ ಯಾವುದೇ ಬಾಕಿ ಬಿಲ್ ಗಳನ್ನು ಕಟ್ಟಬೇಡಿ ಎಂದು ಎನ್ ಸಿಪಿ ಮುಖ್ಯಸ್ಥ ಹಾಗೂ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರು ಮಂಗಳವಾರ ರೈತರಿಗೆ ಕರೆ ನೀಡಿದ್ದಾರೆ.
ಇಂದು ಕಾಂಗ್ರೆಸ್ ಮತ್ತು ಎನ್ ಸಿಪಿ ಆಯೋಜಿಸಿದ್ದ 'ಹಳ್ಳ ಬೋಲ್' ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪವಾರ್, ಸರ್ಕಾರದಿಂದ ಯಾವುದೇ ಪ್ರಯೋಜನೆ ಆಗದಿದ್ದರೆ ಜನ ಸರ್ಕಾರಕ್ಕೆ ಸಹಕರಿಸಬಾರದು ಎಂದರು.
ಇದೇ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಪವಾರ್ ಅವರು, ಪ್ರತಿಪಕ್ಷಗಳಿಗೆ ಬ್ಲಾಕ್ ಮೇಲ್ ಮಾಡುವುದನ್ನು ಮೊದಲು ನಿಲ್ಲಿಸಿ. ನಾವು ಜನಾದೇಶವನ್ನು ಗೌರವಿಸುತ್ತೇವೆ ಎಂದು ಹೇಳಿದ್ದಾರೆ.
ಬ್ಲಾಕ್ ಮೇಲ್ ಮಾಡುವುದೇ ಜನಾದೇಶದ ಭಾಗವೆಂದು ನೀವು ಭಾವಿಸಿದರೆ ಜನ ನಿಮ್ಮನ್ನು ಅಧಿಕಾರದಿಂದ ಕಿತ್ತೊಗೆಯುತ್ತಾರೆ ಎಂದು ಪವಾರ್ ಮಹಾ ಸಿಎಂಗೆ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.