ವಿಜಯ್ ಮಲ್ಯ ಹಸ್ತಾಂತರ ವಿಳಂಬ: ಕೇಂದ್ರ, ವಿದೇಶಾಂಗ ಸಚಿವಾಲಯಕ್ಕೆ ಸುಪ್ರೀಂ ತರಾಟೆ
ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ...

Published On :
ನವದೆಹಲಿ: ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರ ಹಸ್ತಾಂತರ ವಿಳಂಬವಾಗುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧ ಕೇಂದ್ರ ಹಾಗೂ ವಿದೇಶಾಂಗ ಸಚಿವಾಲಯವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಇಂದು ಪ್ರಕರಣದ ವಿಚಾರಣೆ ವೇಳೆ ಕೇಂದ್ರ ಕಾನೂನು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಗಡೀಪಾರು ವಿಚಾರದಲ್ಲಿ ಅಸಹಕಾರದ ಹಿಂದಿನ ಕಾರಣಗಳೇನು? ಕೋರ್ಟ್ನ ಆದೇಶವನ್ನು ಗಂಭೀರವಾಗಿ ಪರಿಗಣಿಸದಿರುವುದು ಏಕೆ? ಎಂದು ಪ್ರಶ್ನಿಸಿದೆ.
ಇಂತಹ ಪ್ರಕರಣಗಳಲ್ಲಿ ಮತ್ತೆ ವಿಳಂಬ ಮಾಡದಂತೆ ಎಚ್ಚರಿಕೆ ನೀಡಿದ ಕೋರ್ಟ್, ಡಿಸೆಂಬರ್ 15ರ ಒಳಗೆ ವರದಿ ನೀಡುವಂತೆ ವಿದೇಶಾಂಗ ಇಲಾಖೆಗೆ ನಿರ್ದೇಶಿಸಿದೆ. ಅಲ್ಲದೇ, ವರದಿ ನೀಡಲು ವಿಳಂಬ ಮಾಡದಂತೆಯೇ ಸೂಚಿಸಿದ್ದು, ಒಂದು ವೇಳೆ ವಿಳಂಬವಾದಲ್ಲಿ ವಿದೇಶಾಂಗ ಇಲಾಖೆ ಕಾರ್ಯದರ್ಶಿಗೆ ಸಮನ್ ಜಾರಿಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.
ಲಂಡನ್ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್, ವಂಚನೆ ಹಾಗೂ ಅಕ್ರಮ ಹಣ ವಹಿವಾಟು ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿರುವ ವಿಜಯ್ ಮಲ್ಯ ಹಸ್ತಾಂತರ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಡಿಸೆಂಬರ್ 14ರ ವರೆಗೆ ನಡೆಯಲಿದೆ. ಬಳಿಕ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ಕೋರ್ಟ್ ತನ್ನ ನಿರ್ಧಾರ ಪ್ರಕಟಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


