ದೇಶ

ಹಸ್ತಲಾಘವ ಮಾಡಿ ಕೆಲವೇ ಗಂಟೆಗಳಲ್ಲಿ ಮೋದಿ ವಿರುದ್ಧ ಮನಮೋಹನ್ ಸಿಂಗ್ ಮತ್ತೆ ವಾಗ್ದಾಳಿ

ರಾಜಕೀಯದಲ್ಲಿ ಯಾರೂ ಮಿತ್ರರೂ ಅಲ್ಲ, ಶತ್ರುಗಳೂ ಅಲ್ಲ ಎಂಬ ಮಾತು ಸದ್ಯ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಪ್ರಧಾನಿ ನರೇಂದ್ರ ಮೋದಿ....

ಹಸ್ತಲಾಘವ ಮಾಡಿ ಕೆಲವೇ ಗಂಟೆಗಳಲ್ಲಿ ಮೋದಿ ವಿರುದ್ಧ ಮನಮೋಹನ್ ಸಿಂಗ್ ಮತ್ತೆ ವಾಗ್ದಾಳಿ
ಮೋದಿ - ಮನಮೋಹನ್ ಸಿಂಗ್ ಹಸ್ತಲಾಘವ
Published On :
ನವದೆಹಲಿ: ರಾಜಕೀಯದಲ್ಲಿ ಯಾರೂ ಮಿತ್ರರೂ ಅಲ್ಲ, ಶತ್ರುಗಳೂ ಅಲ್ಲ ಎಂಬ ಮಾತು ಸದ್ಯ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅನ್ವಯವಾಗಿದ್ದು, ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮೋದಿ ಮತ್ತು ಮನಮೋಹನ್ ಸಿಂಗ್ ಇಬ್ಬರು ಒಬ್ಬರ ಮೇಲೊಬ್ಬರು ಆರೋಪಗಳನ್ನು ಮಾಡಿದರು. ಆದರೆ ಬುಧವಾರ ಸಂಸತ್ ಮೇಲೆ ನಡೆದ ಉಗ್ರರ ದಾಳಿಯಲ್ಲಿ ವೀರಮರಣ ಹೊಂದಿದ ಪೊಲೀಸರಿಗೆ ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮದಲ್ಲಿ ಇವರಿಬ್ಬರು ಮುಖಾಮುಖಿ ಆಗಿ, ಪರಸ್ಪರ ಕೈ ಮುಗಿದು ಹಸ್ತಲಾಘವ ಮಾಡಿದ್ದರು.
ಹಸ್ತಲಾಘವ ಮಾಡಿ ಕೆಲವೇ ಗಂಟೆಗಳಲ್ಲಿ ಪ್ರಧಾನಿ ವಿರುದ್ಧ ಮಾಜಿ ಪ್ರಧಾನಿ ಮತ್ತೆ ವಾಗ್ದಾಳಿ ನಡೆಸಿದ್ದು, ರಾಜಕೀಯ ಲಾಭ ಪಡೆಯುವುದಕ್ಕಾಗಿ ಸುಳ್ಳು ಮತ್ತು ಮೋಸದ ಹೇಳಿಕೆ ನೀಡುವುದು ಸರಿಯಲ್ಲ. ಈ ಸಂಬಂಧ ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿರುವವರ ರಾಷ್ಟ್ರೀಯತೆ ಪ್ರಶ್ನಿಸುವುದು ಸೂಕ್ತವಲ್ಲ. ಇದರಿಂದ ತಮಗೆ ತುಂಬಾ ನೋವಾಗಿದೆ ಎಂದು ಮನಮೋಹನ್ ಸಿಂಗ್ ಅವರು ವಿಡಿಯೋ ಸಂದೇಶದ ಮೂಲಕ ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಗುಜರಾತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆಗೂಡಿ ಪಾಕಿಸ್ತಾನ ಹಸ್ತಕ್ಷೇಪ ಮಾಡಿದೆ ಎಂಬ ಪ್ರಧಾನಿ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಮಾಜಿ ಪ್ರಧಾನಿ, ಗುಜರಾತ್‌ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ನರೇಂದ್ರ ಮೋದಿ ಈ ರೀತಿಯ ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಮೋದಿಯವರು ಈ ರೀತಿ ಹೇಳಿಕೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸಬಾರದು. ಮೋದಿ ತಮ್ಮ ಈ ಹೇಳಿಕೆ ಬಗ್ಗೆ ದೇಶದ ಜನರ ಕ್ಷಮೆ ಕೇಳುತ್ತಾರೆ ಎಂಬ ವಿಶ್ವಾಸವಿದೆ. ಈ ಮೂಲಕ ಅವರು ತಮ್ಮ ಹುದ್ದೆ ಹಾಗೂ ಪ್ರಧಾನಮಂತ್ರಿ ಕಾರ್ಯಾಲಯದ ಘನತೆಯನ್ನು ಕಾಪಾಡುತ್ತಾರೆ ಎಂದು ನಂಬಿದ್ದೇನೆ ಎಂದು ಮನಮೋಹನ್ ಸಿಂಗ್ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.