ಮೋದಿಯವರಂತಹ ದುರ್ಬಲ ಪ್ರಧಾನಿಯನ್ನು ಹೊಂದಿರುವುದು ದುರದೃಷ್ಟ: ಹಾರ್ದಿಕ್ ಪಟೇಲ್
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪಾಕಿಸ್ತಾನದ ಹಸ್ತಕ್ಷೇಪವಿದೆ ಎಂಬ ಪ್ರಧಾನ ಮಂತ್ರಿ ನರೇಂದ್ರ ...

Published On :
ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪಾಕಿಸ್ತಾನದ ಹಸ್ತಕ್ಷೇಪವಿದೆ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆರೋಪವನ್ನು ಟೀಕಿಸಿರುವ ಪಾಟಿದಾರ್ ಅನಮತ್ ಆಂದೋಲನ ಸಮಿತಿ ನಾಯಕ ಹಾರ್ದಿಕ್ ಪಟೇಲ್ ಮೋದಿಯವರಂತಹ ದುರ್ಬಲ ಪ್ರಧಾನ ಮಂತ್ರಿಯನ್ನು ಹೊಂದಿರುವುದು ನಮ್ಮ ದೌರ್ಭಾಗ್ಯ ಎಂದಿದ್ದಾರೆ.
ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಅವರು, ಕಳೆದ 70 ವರ್ಷಗಳಲ್ಲಿ ಭಾರತಕ್ಕೆ ಯಾವುದೇ ಹಾನಿ ಮಾಡಲು ಸಾಧ್ಯವಾಗದ ಪಾಕಿಸ್ತಾನದ ಬಗ್ಗೆ ಪ್ರಧಾನ ಮಂತ್ರಿಯಾಗಿ ದೇಶದ ಜನತೆಯಲ್ಲಿ ನೆರೆ ರಾಷ್ಟ್ರದ ಬಗ್ಗೆ ಭಯ ಹುಟ್ಟಿಸುತ್ತಿದ್ದಾರೆ ಎಂದರು.
ಕಳೆದ ಭಾನುವಾರ ಗುಜರಾತ್ ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಿ ಮೋದಿಯವರು, ಗುಜರಾತ್ ಚುನಾವಣೆಯಲ್ಲಿ ಪಾಕಿಸ್ತಾನ ಮೂಗು ತೂರಿಸುತ್ತಿದೆ. ಇತ್ತೀಚೆಗೆ ಪಾಕಿಸ್ತಾನದ ನಾಯಕರನ್ನು ಇತ್ತೀಚೆಗೆ ಕಾಂಗ್ರೆಸ್ ನ ಉನ್ನತ ನಾಯಕರು ಏಕೆ ಭೇಟಿ ಮಾಡಿದರೆಂದು ವಿವರಣೆ ನೀಡಬೇಕೆಂದು ಒತ್ತಾಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿHardik Patelಹಾರ್ದಿಕ್ ಪಟೇಲ್ಪಾಕಿಸ್ತಾನ ನಾಯಕರುಗುಜರಾತ್ ವಿಧಾನಸಭೆ ಚುನಾವಣೆGujarat assemly electionPakistan leaders
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


