ಚುನಾವಣಾ ಆಯೋಗಕ್ಕೆ ಲಂಚ ಪ್ರಕರಣ: ಪೂರಕ ಚಾರ್ಜ್ ಶೀಟ್ ನಲ್ಲಿ ದಿನಕರನ್ ಆರೋಪಿ
ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ದೆಹಲಿ ಪೊಲೀಸರು ಪೂರಕ ಚಾರ್ಜ್ ಶೀಟ್ ಸಲ್ಲಿಸಿದ್ದು,....

Published On :
ನವದೆಹಲಿ: ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ದೆಹಲಿ ಪೊಲೀಸರು ಪೂರಕ ಚಾರ್ಜ್ ಶೀಟ್ ಸಲ್ಲಿಸಿದ್ದು, ಅದರಲ್ಲಿ ಎಐಎಡಿಎಂಕೆ ಉಚ್ಚಾಟಿತ ನಾಯಕ ಟಿಟಿವಿ ದಿನಕರನ್ ಆರೋಪಿಯನ್ನಾಗಿ ಮಾಡಲಾಗಿದೆ.
ದೆಹಲಿ ಪೊಲೀಸರು ಇಂದು 272 ಪುಟಗಳ ಪೂರಕ ಚಾರ್ಜ್ ಶೀಟ್ ಅನ್ನು ಹೆಚ್ಚು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಕಿರಣ್ ಬನ್ಸಾಲ್ ಅವರಿಗೆ ಸಲ್ಲಿಸಿದ್ದು, ಡಿಸೆಂಬರ್ 21ರಂದು ಅದನ್ನು ಪರಿಗಣಿಸುವ ಸಾಧ್ಯತೆ ಇದೆ.
ದಿನಕರನ್, ಮಧ್ಯವರ್ತಿ ಸುಕೇಶ್ ಚಂದ್ರಶೇಖರ್, ದಿನಕರನ್ ಬಹುದಿನಗಳ ಗೆಳೆಯ ಮಲ್ಲಿಕಾರ್ಜನ್ ಹಾಗೂ ಇತರೆ ಆರು ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಕಳೆದ ಜುಲೈನಲ್ಲಿ ದೆಹಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ದಿನಕರನ್ ಅವರ ಹೆಸರು ಇರಲಿಲ್ಲ. ಆದರೆ ಇಂದು ಸಲ್ಲಿಸಿದ ಪೂರಕ ಚಾರ್ಜ್ ಶೀಟ್ ನಲ್ಲಿ ಆರೋಪಿಯನ್ನಾಗಿ ಮಾಡಲಾಗಿದೆ.
ಎಐಎಡಿಎಂಕೆಯ ಎರಡೆಲೆ ಚಿಹ್ನೆ ಪಡೆಯಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ ದಿನಕರನ್ ಅವರನ್ನು ದೆಹಲಿ ಪೊಲೀಸರು ಕಳೆದ ಏಪ್ರಿಲ್ ನಲ್ಲಿ ಬಂಧಿಸಿದ್ದರು. ಈಗ ಜಾಮೀನಿನ ಮೇಲೆ ಹೊರಗಡೆ ಇರುವ ದಿನಕರನ್ ಅವರು ಚೆನ್ನೈ ಆರ್ ಕೆ ನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಚಾರ್ಜ್ ಶೀಟ್ChargesheetElection Commissionಚುನಾವಣಾ ಆಯೋಗಲಂಚ ಪ್ರಕರಣbribery caseಟಿಟಿವಿ ದಿನಕರನ್TTV Dhinakaran
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


