ಚುನಾವಣೋತ್ತರ ಸಮೀಕ್ಷೆ: ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲುವು ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ವರ್ಸಸ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಹುಲ್ ಗಾಂಧಿ ಎಂದೇ ಬಿಂಬಿತವಾಗಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶ....

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವರ್ಸಸ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಹುಲ್ ಗಾಂಧಿ ಎಂದೇ ಬಿಂಬಿತವಾಗಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದ್ದು, ವಿವಿಧ ಸಂಸ್ಥೆಗಳು ನಡೆಸಿದ ಎರಡೂ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರ ಬಿದ್ದಿವೆ.
ವಿವಿಧ ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, ಪ್ರಧಾನಿ ತವರು ರಾಜ್ಯ ಗುಜರಾತ್ ನಲ್ಲಿ ಬಿಜೆಪಿ ಸತತ ಆರನೇ ಅವಧಿಗೆ ಅಧಿಕಾರಕ್ಕೇರಲಿದ್ದು, ಸರಳ ಬಹುಮತ ಲಭಿಸಲಿದೆ.
ಟೈಮ್ಸ್ ನೌ, ವಿಎಂಆರ್ ಸಮೀಕ್ಷೆ ಪ್ರಕಾರ, ಗುಜರಾತ್‌ನಲ್ಲಿ ಒಟ್ಟು 182 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಜೆಪಿ ಸುಮಾರು 105-110 ಸ್ಥಾನ ಪಡೆಯುವ ಸಾಧ್ಯತೆ ಇದ್ದು, ಕಾಂಗ್ರೆಸ್‌ಗೆ 65-70 ಸ್ಥಾನ ಲಭಿಸಲಿದೆ ಮತ್ತು ಇತರರು ಮೂರು ಸ್ಥಾನಗಳಲ್ಲಿ ಗೆಲವು ಸಾಧಿಸಲಿದ್ದಾರೆ. ಗುಜರಾತ್ ನಲ್ಲಿ ಸರಳ ಬಹುಮತಕ್ಕೆ 2 ಸ್ಥಾನಗಳ ಅಗತ್ಯವಿದೆ.
ಇನ್ನು ರಿಪಬ್ಲಿಕ್ ನ್ಯೂಸ್ ಸಮೀಕ್ಷೆ ಪ್ರಕಾರ, ಗುಜರಾತ್ ನಲ್ಲಿ ಬಿಜೆ 108 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಕಾಂಗ್ರೆಸ್ ಪಕ್ಷ 74 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ತಿಳಿಸಿದೆ.
ನ್ಯೂಸ್ ಎಕ್ಸ್ ಅಂಡ್ ಸಿಎನ್ ಎಕ್ಸ್ ಪ್ರಕಾರ ಬಿಜೆಪಿ 115, ಕಾಂಗ್ರೆಸ್ 65, ಇತರೆ 2 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ.
ಟಿಒಐ ಆನ್ ಲೈನ್ ಹಾಗೂ ಸಿವೋಟರ್ ಸಮೀಕ್ಷೆ ಪ್ರಕಾರ, ಬಿಜೆಪಿ 108, ಕಾಂಗ್ರೆಸ್ 74 ಹಾಗೂ ಇತರರು ಶೂನ್ಯ ಸಂಪಾದಿಸುವ ನಿರೀಕ್ಷೆ ಇದೆ.
ಇಂಡಿಯಾ ಟುಡೇ, ಆಕ್ಸಿಸ್ ಸಮೀಕ್ಷೆ ಪ್ರಕಾರ, ಬಿಜೆಪಿ 107, ಕಾಂಗ್ರೆಸ್ 74 ಹಾಗೂ ಇತರರು ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ.
ಗುಜರಾತ್ ನಲ್ಲಿ ಡಿಸೆಂಬರ್ 9ರಂದು ಮೊದಲ ಹಂತದ ಚುನಾವಣೆ ನಡೆದಿತ್ತು. ಒಟ್ಟು 89 ಕ್ಷೇತ್ರಗಳಲ್ಲಿ ಮತದಾನವಾಗಿತ್ತು. ಇಂದು ನಡೆದ 2ನೇ ಹಂತದಲ್ಲಿ 93 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.
ಹಿಮಾಚಲ ಪ್ರದೇಶ
ಹಿಮಾಚಲ ಪ್ರದೇಶದಲ್ಲೂ ಕಮಲ ಅರಳಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಒಟ್ಟು 68 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 40ರಿಂದ 50 ಸ್ಥಾನ, ಆಡಳಿತರೂಢ ಕಾಂಗ್ರೆಸ್ ಕೇವಲ 15 ರಿಂದ 20 ಸ್ಥಾನ ಪಡೆಯಲಿದೆ ಎಂದು ರಿಪಬ್ಲಿಕ್ ನ್ಯೂಸ್ ಸಮೀಕ್ಷೆ ಹೇಳಿದೆ.
ಇಂಡಿಯಾ ಟುಡೇ ಆಕ್ಸಿಸ್ ಸಮೀಕ್ಷೆ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 51 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ ಕೇವಲ 17 ಸ್ಥಾನ ಗಳಿಸಲಿದೆ ಎಂದು ಹೇಳಿದೆ.
ಎಬಿಪಿ ನ್ಯೂಸ್, ಸಿಎಸ್ ಡಿಎಸ್ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 47ರಿಂದ 55 ಸ್ಥಾನ ಗಳಿಸಲಿದ್ದು, ಕಾಂಗ್ರೆಸ್ 13ರಿಂದ 20 ಸ್ಥಾನ ಪಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


