ಆರ್ ಕೆ ನಗರ ಉಪ ಚುನಾವಣೆ: ವೇತನ ಸಹಿತ ರಜೆ ನೀಡಲು ಕಂಪೆನಿಗಳಿಗೆ ಕಾರ್ಮಿಕ ಇಲಾಖೆ ಮನವಿ
ಡಿಸೆಂಬರ್ 21ರಂದು ನಡೆಯಲಿರುವ ರಾಧಾಕೃಷ್ಣ ನಗರ ಉಪ ಚುನಾವಣೆ ಪ್ರಯುಕ್ತ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡುವಂತೆ...

Published On :
ಚೆನ್ನೈ: ಡಿಸೆಂಬರ್ 21ರಂದು ನಡೆಯಲಿರುವ ರಾಧಾಕೃಷ್ಣ ನಗರ ಉಪ ಚುನಾವಣೆ ಪ್ರಯುಕ್ತ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡುವಂತೆ ಸರ್ಕಾರಿ ಸ್ವಾಮ್ಯದ ಹಾಗೂ ಖಾಸಗಿ ಕಂಪನಿಗಳಿಗೆ ಕಾರ್ಮಿಕ ಇಲಾಖೆ ಗುರುವಾರ ಮನವಿ ಮಾಡಿದೆ.
ಆರ್ ಕೆ ನಗರ ಕ್ಷೇತ್ರವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಸ್ಮಾಮ್ಯದ ಹಾಗೂ ಖಾಸಗಿ ಕೈಗಾರಿಕೆ, ವಾಣಿಜ್ಯ ಉದ್ಯಮ ಸಂಸ್ಥೆಗಳು ಉದ್ಯೋಗಿಗಳಿಗೆ ವೇತನ ಸಹಿತ ರಜೆ ಘೋಷಿಸುವಂತೆ ಮನವಿ ಮಾಡುತ್ತಿದ್ದೇವೆ ಎಂದು ಕಾರ್ಮಿಕ ಇಲಾಖೆ ಆಯುಕ್ತ ಕ.ಬಾಲಚಂದ್ರನ್ ಅವರು ಇಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ನಿಧನದಿಂದಾಗಿ ತೆರವಾಗಿರುವ ಆರ್ ಕೆ ನಗರ ಕ್ಷೇತ್ರಕ್ಕೆ ಡಿಸೆಂಬರ್ 21ರಂದು ಉಪ ಚುನಾವಣೆ ನಡೆಯಲಿದ್ದು, ಎಐಡಿಎಂಕೆ ಪಕ್ಷದ ಹಿರಿಯ ನಾಯಕ ಇ. ಮಧುಸೂಧನನ್, ಡಿಎಂಕೆಯ ಎನ್.ಮರುಧು ಗಣೇಶ್ ನಡುವೆ ಹೆಚ್ಚಿನ ಪೈಪೋಟಿ ಕಂಡು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


