ವರ್ಷದೊಳಗೆ ಮಹಾ ಬಿಜೆಪಿ ಸರ್ಕಾರದಿಂದ ಶಿವಸೇನೆ ಹೊರನಡೆಯಲಿದೆ: ಆದಿತ್ಯ ಠಾಕ್ರೆ
ಶಿವಸೇನೆ ಇನ್ನು ಒಂದು ವರ್ಷದೊಳಗೆ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದಿಂದ ಹೊರನಡೆಯಲಿದೆ ಎಂದು ಯುವ ಸೇನಾ....

Published On :
ಅಹ್ಮದನಗರ: ಶಿವಸೇನೆ ಇನ್ನು ಒಂದು ವರ್ಷದೊಳಗೆ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದಿಂದ ಹೊರನಡೆಯಲಿದೆ ಎಂದು ಯುವ ಸೇನಾ ಮುಖ್ಯಸ್ಥ ಆದಿತ್ಯ ಠಾಕ್ರೆ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆದಿತ್ಯ ಠಾಕ್ರೆ ಅವರು, ಇನ್ನು ಒಂದು ವರ್ಷದಲ್ಲಿ ನಾವು ಬಿಜೆಪಿ ಸರ್ಕಾರದಿಂದ ಹೊರ ಬರಲಿದ್ದೇವೆ ಮತ್ತು ಮುಂದೆ ಸ್ವತಂತ್ರವಾಗಿ ಅಧಿಕಾರ ಹಿಡಿಯುವುದಾಗಿ ಹೇಳಿದ್ದಾರೆ. ಇದರೊಂದಿಗೆ ಶಿಸೇನೆ ಬಿಜೆಪಿ ಜತೆಗಿನ ದೀರ್ಘಾವಧಿಯ ಮೈತ್ರಿಯನ್ನು ಕಡಿದುಕೊಳ್ಳಲು ಮುಂದಾಗಿದೆ.
ಮಹಾರಾಷ್ಟ್ರದಲ್ಲಿ ರಾಜಕೀಯದ ಬಿಸಿ ಹೆಚ್ಚಾಗಿದೆ. ಚುನಾವಣೆ ಯಾವಾಗ ನಡೆಯುತ್ತದೆ ಎಂಬುದು ಗೊತ್ತಿಲ್ಲ. ಆದರೆ, ಒಂದು ವರ್ಷದೊಳಗೆಯೇ ನಡೆಯುವಂತೆ ತೋರುತ್ತಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಆ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು ಎಂದು ಕರೆ ನೀಡಿದ್ದಾರೆ.
ಶಿವಸೇನೆ ಇಂತಹ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜನರು ಸಮಸ್ಯೆಗೆ ಸಿಲುಕಿದ್ದಾರೆ ಎಂದು ಸರ್ಕಾರವನ್ನು ವಿರೋಧಿಸಿ ಕಳೆದ ಸೆಪ್ಟೆಂಬರ್‌ನಲ್ಲಿಯೂ ಇಂತಹದೇ ಹೇಳಿಕೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


