ದೇಶ

ಸುಗಮ ಕಲಾಪಕ್ಕೆ ಸಹಕಾರ ನೀಡಿ: ಪ್ರತಿಪಕ್ಷಗಳಿಗೆ ಕೇಂದ್ರ ಸರ್ಕಾರದ ಮನವಿ

ಶುಕ್ರವಾರದಿಂದ ಆರಂಭವಾಗಲಿರುವ ಸಂಸತ್ ನ ಚಳಿಗಾಲದ ಅಧಿವೇಶನದಲ್ಲಿ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಕೇಂದ್ರ ಸರ್ಕಾರ ವಿಪಕ್ಷಗಳಿಗೆ ಮನವಿ ಮಾಡಿಕೊಂಡಿದೆ.

ಸುಗಮ ಕಲಾಪಕ್ಕೆ ಸಹಕಾರ ನೀಡಿ: ಪ್ರತಿಪಕ್ಷಗಳಿಗೆ ಕೇಂದ್ರ ಸರ್ಕಾರದ ಮನವಿ
ಸಂಗ್ರಹ ಚಿತ್ರ
Published On :
ನವದೆಹಲಿ: ಶುಕ್ರವಾರದಿಂದ ಆರಂಭವಾಗಲಿರುವ ಸಂಸತ್ ನ ಚಳಿಗಾಲದ ಅಧಿವೇಶನದಲ್ಲಿ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಕೇಂದ್ರ ಸರ್ಕಾರ ವಿಪಕ್ಷಗಳಿಗೆ ಮನವಿ ಮಾಡಿಕೊಂಡಿದೆ.
ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು ವಿಪಕ್ಷಗಳಿಗೆ ಮನವಿ ಮಾಡಿದ್ದು, ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ವಿಪಕ್ಷಗಳಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ  ಮಾಡಿರುವ ಅವರು, ಸುಗಮ ಕಲಾಪಕ್ಕೆ ಎಲ್ಲ ಪಕ್ಷಗಳ ಸಹಕಾರ ಅಗತ್ಯ. ಪ್ರಮುಖವಾಗಿ ವಿಪಕ್ಷಗಳು ಸುಗಮ ಕಲಾಪಕ್ಕಾಗಿ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೂ ಮೊದಲು ಗುರವಾರ ಅಂದರೆ  ಸಂಸತ್ ಕಲಾಪ ಆರಂಭಕ್ಕೂ ಮುನ್ನ ನಡೆದ ಸರ್ವಪಕ್ಷಗಳ ಸಭೆಯಲ್ಲೂ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಪ್ರತಿಪಕ್ಷಗಳಿಗೆ ಮನವಿ ಮಾಡಿಕೊಂಡರು.
ಈ ವೇಳೆ ಪ್ರಮುಖ ಕಾಯ್ದೆಗಳು ಹಾಗೂ ವಿಧೇಯಕಗಳ ಅನುಮೋದನೆ ಮತ್ತು ಜಾರಿ ಅಗತ್ಯ ಎಂದು ಹೇಳಿದ ಅವರು, ಈ ಬಾರಿ ಕೇವಲ 14 ಸಿಟ್ಟಿಂಗ್ ಗಳು ಮಾತ್ರ ಇದ್ದು, ಕಳೆದ ಬಾರಿ 21 ಸಿಟ್ಟಿಂಗ್ ಗಳು ಇದ್ದವು. ಹೀಗಾಗಿ  ಸಮಯಾವಕಾಶ ಕಡಿಮೆ ಇರುವುದರಿಂದ ವ್ಯರ್ಥ ಚರ್ಚೆ ಮತ್ತು ವಿವಾದಕ್ಕೆ ಆಸ್ಪದ ಬೇಡ ಎಂದು ಅನಂತ್ ಕುಮಾರ್ ಮನವಿ ಮಾಡಿಕೊಂಡರು.
ಇತ್ತ ಸರ್ಕಾರದ ಮನವಿಗೆ ಕಾಂಗ್ರೆಸ್ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದ್ದು, ಗುಜರಾತ್ ಚುನಾವಣೆ ವೇಳೆ ಪ್ರಧಾನಿ ಮೋದಿ ಕಾಂಗ್ರೆಸ್ ನಾಯಕರು ಪಾಕಿಸ್ತಾನ ರಾಯಭಾರಿಗಳನ್ನು ರಹಸ್ಯವಾಗಿ  ಭೇಟಿ ಮಾಡಿದ್ದರು ಎಂಬ ಆರೋಪದ ಕುರಿತು ಕ್ಷಮೆಗೆ ಆಗ್ರಹಿಸುತ್ತಿದೆ. ಅಲ್ಲದೆ ಕಾಶ್ಮೀರ ವಿಚಾರ, ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಹಣಿಯಲು ಕಾಂಗ್ರೆಸ್ ಕೂಡ ಸಿದ್ಧತೆಯಲ್ಲಿ ತೊಡಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.