ದೆಹಲಿ: ಮಾನವ ಸಂಪನ್ಮೂಲ ಇಲಾಖೆ ಅಧಿಕಾರಿಯ ಮೃತದೇಹ ರೈಲ್ವೆ ಹಳಿ ಮೇಲೆ ಪತ್ತೆ
ಮಾನವ ಸಂಪನ್ಮೂಲ ಸಚಿವಾಲಯದ ಅಧಿಕಾರಿಯೊಬ್ಬರು ಕಾಣೆಯಾದ ಮೂರು ದಿನಗಳ ನಂತರ ಅವರ...

Published On :
ನವದೆಹಲಿ: ಮಾನವ ಸಂಪನ್ಮೂಲ ಸಚಿವಾಲಯದ ಅಧಿಕಾರಿಯೊಬ್ಬರು ಕಾಣೆಯಾದ ಮೂರು ದಿನಗಳ ನಂತರ ಅವರ ಮೃತದೇಹ ಪಾಲಮ್ ಹತ್ತಿರ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದ್ವಾರಕ ಮೂಲದ ಭಾರತೀಯ ನಾಗರಿಕ ಲೆಕ್ಕಪತ್ರ ಸೇವಾಧಿಕಾರಿ ಜೀತೆಂದ್ರ ಕುಮಾರ್ ಝಾ ಅವರು ಮೊನ್ನೆ ಸೋಮವಾರ ಬೆಳಗ್ಗೆ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ಕಾಣೆಯಾಗಿದ್ದರು. ನಿನ್ನೆ ಸಾಯಂಕಾಲ ಪಾಲಮ್ ಹತ್ತಿರ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಪೊಲೀಸರು ಇಂದು ಅದು ಝಾ ಅವರ ಮೃತದೇಹ ಎಂದು ಪತ್ತೆಹಚ್ಚಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡುಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಝಾ ಅವರು ತೊಟ್ಟಿದ್ದ ಶರ್ಟ್ ನ ಕಿಸೆಯಲ್ಲಿ ಆತ್ಮಹತ್ಯಾ ಪತ್ರವೊಂದು ಸಿಕ್ಕಿದ್ದು ಅದರಲ್ಲಿ ತಮ್ಮ ಸಾವಿಗೆ ಯಾರು ಕೂಡ ಕಾರಣರಲ್ಲ ಎಂದು ಬರೆದಿದ್ದಾರೆ.
1998ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಝಾ ಮಾನವ ಸಂಪನ್ಮೂಲ ಇಲಾಖೆಗೆ ವರ್ಗವಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Delhirailway trackರೈಲ್ವೆ ಹಳಿಮೃತದೇಹbodyJeetendra Kumar JhaHRD Ministry officialಜೀತೆಂದ್ರ ಕುಮಾರ್ ಝಾಮಾನವ ಸಂಪನ್ಮೂಲ ಸಚಿವಾಲಯ. ದೆಹಲಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


