ಸೋನಿಯಾ ಪಕ್ಷದ ಅಧ್ಯಕ್ಷ ಸ್ಥಾನದಿಂದ ನಿವೃತ್ತರಾಗಿದ್ದಾರೆ, ರಾಜಕೀಯದಿಂದಲ್ಲ: ಕಾಂಗ್ರೆಸ್
ರಾಹುಲ್ ಗಾಂಧಿ ಡಿ.16 ರಂದು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದು, ಸೋನಿಯಾ ಗಾಂಧಿ "ಈಗ ನನ್ನದು ನಿವೃತ್ತಿಯ ಹಾದಿ" ಎಂದು ಹೇಳಿದ್ದರ ಬಗ್ಗೆ ವರದಿ ಪ್ರಕಟವಾಗಿತ್ತು.

Published On :
ನವದೆಹಲಿ: ರಾಹುಲ್ ಗಾಂಧಿ ಡಿ.16 ರಂದು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದು, ಸೋನಿಯಾ ಗಾಂಧಿ "ಈಗ ನನ್ನದು ನಿವೃತ್ತಿಯ ಹಾದಿ" ಎಂದು ಹೇಳಿದ್ದರ ಬಗ್ಗೆ ವರದಿ ಪ್ರಕಟವಾಗಿತ್ತು. ಈ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪಕ್ಷದ ವಕ್ತಾರ ರಣ್ದೀಪ್ ಸುರ್ಜೆವಾಲ, ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನದಿಂದ ನಿವೃತ್ತರಾಗಿದ್ದಾರೆ. ರಾಜಕೀಯದಿಂದ ಅಲ್ಲ ಎಂದು ಹೇಳಿದ್ದಾರೆ.
ಸೋನಿಯಾ ಗಾಂಧಿ ಅವರು ರಾಜಕೀಯದಿಂದ ನಿವೃತ್ತರಾಗುತ್ತಿಲ್ಲ, ಕಾಂಗ್ರೆಸ್ ನ ಸಿದ್ಧಾಂತಕ್ಕೆ ಅವರ ಬದ್ಧತೆ, ಬುದ್ಧಿವಂತಿಕೆ ಎಂದಿಗೂ ದಾರಿ ದೀಪವಾಗಿರಲಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೆವಾಲ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಈಗ ನನ್ನದು ನಿವೃತ್ತಿಯ ಹಾದಿ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿCongressಕಾಂಗ್ರೆಸ್New DelhiSonia GandhiಸೋನಿಯಾಗಾಂಧಿAICC President Rahul Gandhiಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


