ಕಲ್ಲಿದ್ದಲು ಹಗರಣ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾಗೆ 3 ವರ್ಷ ಜೈಲು ಶಿಕ್ಷೆ
ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಮಧು ಕೋಡಾಗೆ ದೆಹಲಿ ಸಿಬಿಐ ವಿಶೇಷ ನ್ಯಾಯಾಲಯ ಮೂರು ವರ್ಷ...

Published On :
ನವದೆಹಲಿ: ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಮಧು ಕೋಡಾಗೆ ದೆಹಲಿ ಸಿಬಿಐ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಸೇರಿ ನಾಲ್ವರು ತಪ್ಪಿತಸ್ಥರು ಎಂದು ನ್ಯಾಯಾಲಯ ಬುಧವಾರ ತೀರ್ಪು ನೀಡಿದ್ದು ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು. ಇಂದು ವಿಶೇಷ ನ್ಯಾಯಧೀಶರಾದ ಭರತ್ ಪರಶಾರ್ ಅವರು ಶಿಕ್ಷೆಯ ಪ್ರಮಾಣವನ್ನು ಘೋಷಿಸಿದ್ದು ಮಧು ಕೋಡಾ ಸೇರಿದಂತೆ ಕಲ್ಲಿದ್ದಲು ಕಾರ್ಯದರ್ಶಿ ಎಚ್ ಸಿ ಗುಪ್ತಾ, ಜಾರ್ಖಂಡ್ ಮಾಜಿ ಮುಖ್ಯ ಕಾರ್ಯದರ್ಶಿ ಅಶೋಕ್ ಕುಮಾರ್ ಬಸುಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳ ಮೇಲೆ ಕ್ರಿಮಿನಲ್ ಸಂಚು, ವಂಚನೆ, ಭ್ರಷ್ಟಾಚಾರ ಆರೋಪ ಹೊರಿಸಲಾಗಿತ್ತು. ಈ ಆರೋಪಗಳು ಸಾಬೀತಾಗಿತ್ತು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಿದ್ದಲು ಟೆಂಡರ್ ಪಡೆದಿದ್ದ ವಿಶೂಲ್ ಸಂಸ್ಧೆಗೆ ನ್ಯಾಯಾಲಯ 50 ಲಕ್ಷ ದಂಡ ವಿಧಿಸಿದೆ.
ಜಾರಿ ನಿರ್ದೇಶನಾಲಯದ ಪ್ರಕಾರ ಸುಮಾರು 2500 ಕೋಟಿ ರುಪಾಯಿ ಅವ್ಯವಹಾರ ಆರೋಪ ಹೊರೆಸಲಾಗಿತ್ತು. ನಂತರ 3400 ಕೋಟಿ ಅಕ್ರಮ ಬಯಲಿಗೆಳೆಯಲಾಗಿತ್ತು. ಸಿಬಿಐ ತಂಡ ದೇಶಾದ್ಯಂತ ಸುಮಾರು 70 ಕಡೆಗಳಲ್ಲಿ ದಾಳಿ ನಡೆಸಿದ್ದರು. ಮಧುಕೋಡಾ ಅವರ ಸ್ಥಿರ ಹಾಗೂ ಚರಾಸ್ಥಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಮುಟ್ಟುಗೋಲು ಹಾಕಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


