ಗುಜರಾತ್ ಚುನಾವಣೆ: ಡಿ.17ರಂದು 6 ಮತಗಟ್ಟೆಗಳಲ್ಲಿ ಮರು ಮತದಾನ
ಗುಜರಾತ್ ವಿಧಾನಸಭೆಗೆ ಕಳೆದ ಡಿಸೆಂಬರ್ 14ರಂದು ನಡೆದ ಎರಡನೇ ಹಂತದ ಚುನಾವಣೆ ವೇಳೆ ಆರು ಮತಗಟ್ಟೆಗಳಲ್ಲಿ ಅಧಿಕಾರಿಗಳು...

Published On :
ಗಾಂಧಿನಗರ: ಗುಜರಾತ್ ವಿಧಾನಸಭೆಗೆ ಕಳೆದ ಡಿಸೆಂಬರ್ 14ರಂದು ನಡೆದ ಎರಡನೇ ಹಂತದ ಚುನಾವಣೆ ವೇಳೆ ಆರು ಮತಗಟ್ಟೆಗಳಲ್ಲಿ ಅಧಿಕಾರಿಗಳು ಇವಿಎಂಗಳಲ್ಲಿ ಅಸ್ತಿತ್ವದಲ್ಲಿರುವ ಡೇಟಾವನ್ನು ಅಳಿಸಲು ಮರೆತ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಆ ಆರು ಮತಗಟ್ಟೆಗಳಲ್ಲಿ ಡಿಸೆಂಬರ್ 17ರಂದು ಮರು ಮತದಾನಕ್ಕೆ ಶನಿವಾರ ಆದೇಶಿಸಿದೆ.
ಈ ಆರು ಮತಗಟ್ಟೆಗಳ ಚುನಾವಣಾ ಅಧಿಕಾರಿಗಳು ಅಣಕು ಚುನಾವಣಾ ಸಮೀಕ್ಷೆಯ ಫಲಿತಾಂಶಗಳನ್ನು ಅಳಿಸಿಹಾಕುವುದನ್ನು ಮರೆತಿದ್ದರು. ಹೀಗಾಗಿ ಡಿಸೆಂಬರ್ 14ರಂದು ಮರು ಮತದಾನ ನಡೆಸಲಾಗುತ್ತಿದೆ ಎಂದು ಗುಜರಾತ್ ಮುಖ್ಯ ಚುನಾವಣಾ ಆಯುಕ್ತ ಬಿಬಿ ಸ್ವೈನ್ ಅವರು ಹೇಳಿದ್ದಾರೆ.
ತೀವ್ರ ಕುತೂಹಲ ಕೆರಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ವಿಧಾನಸಭೆಗೆ ಎರಡು ಹಂತದ ಚುನಾವಣೆ ನಡೆದಿದ್ದು, ಡಿಸೆಂಬರ್ 18ರಂದು ಫಲಿತಾಂಶ ಪ್ರಕಟವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


