ದೇಶ

ಅಧಿಕಾರಿಗಳ ಹನಿಟ್ರ್ಯಾಪ್​ ಮಾಡಲು ಯತ್ನಿಸಿದ ಪಾಕ್ ಪ್ರಯತ್ನ ವಿಫಲಗೊಳಿಸಿದ ಭಾರತ!

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಭಾರತದ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡುವ ಗೌಪ್ಯ ಮಾಹಿತಿಗಳನ್ನು ಸಂಗ್ರಹಿಸಲು ಹೂಡಿದ್ದ ಕುತಂತ್ರವನ್ನು ಭಾರತೀಯ ಅಧಿಕಾರಿಗಳು ವಿಫಲಗೊಳಿಸಿದ್ದಾರೆ.

ಅಧಿಕಾರಿಗಳ ಹನಿಟ್ರ್ಯಾಪ್​ ಮಾಡಲು ಯತ್ನಿಸಿದ ಪಾಕ್ ಪ್ರಯತ್ನ ವಿಫಲಗೊಳಿಸಿದ ಭಾರತ!
ಸಂಗ್ರಹ ಚಿತ್ರ
Published On :
ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಭಾರತದ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡುವ ಗೌಪ್ಯ ಮಾಹಿತಿಗಳನ್ನು ಸಂಗ್ರಹಿಸಲು ಹೂಡಿದ್ದ ಕುತಂತ್ರವನ್ನು ಭಾರತೀಯ ಅಧಿಕಾರಿಗಳು ವಿಫಲಗೊಳಿಸಿದ್ದಾರೆ.
ಭಾರತಕ್ಕೆ ಸಂಬಂಧಿಸಿದ ಅಮೂಲ್ಯ ಗೌಪ್ಯ ಹಾಗೂ ಸೂಕ್ಷ್ಮ ಮಾಹಿತಿಯನ್ನು ಪಡೆಯಲು ಪಾಕಿಸ್ತಾನದ ಇಸ್ಲಾಮಾಬಾದ್​ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಭಾರತೀಯ ಹೈ ಕಮೀಷನ್​ ಅಧಿಕಾರಿಗಳನ್ನು ಹನಿಟ್ರ್ಯಾಪ್​  ಮಾಡಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಯತ್ನಿಸಿತ್ತು. ಆದರೆ ಐಎಸ್​ಐನ ಈ ಸಂಚನ್ನು ಗ್ರಹಿಸಿದ ಭಾರತೀಯ ಅಧಿಕಾರಿಗಳು ಇಲ್ಲಿ ಇರುವ ಅಧಿಕಾರಿಗಳಿಗೆ ಇದರ ಬಗ್ಗೆ ಕೂಡಲೇ ಮಾಹಿತಿ ನೀಡಿದ್ದಾರೆ. 
ಮಾಹಿತಿ ಲಭ್ಯವಾದ ಕೂಡಲೇ ಅಧಿಕಾರಿಗಳು ದೆಹಲಿಗೆ ಮರಳಿದ್ದು, ಯಾವುದೇ ನೆರೆ ರಾಷ್ಟ್ರಕ್ಕೆ ಯಾವುದೇ ಮಾಹಿತಿಯನ್ನು ಸೋರಿಕೆ ಮಾಡಿಲ್ಲ ಎನ್ನಲಾಗಿದೆ. ಸದ್ಯ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ವಿಚಾರಣೆಗೆ  ಒಳಪಟ್ಟಿರುವ ಅಧಿಕಾರಿಗಳು ಯಾವುದೇ ತಪ್ಪು ಹಜ್ಜೆ ಇಟ್ಟಿಲ್ಲ ಮತ್ತು ವಿಚಾರಣೆಯನ್ನು ಮುಂದುವರೆಸಲು ಸಹಕಾರ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ ಮೂವರು ಅಧಿಕಾರಿಗಳ ಕುರಿತು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಪ್ರಸ್ತುತ ಪಾಕಿಸ್ತಾನದ ಸಂಚಿಗೆ ತುತ್ತಾಗಿರುವ ಅಧಿಕಾರಿಗಳನ್ನು ಮತ್ತೆ ಕರ್ತವ್ಯ ನಿರ್ವಹಿಸಲು ಕಳುಹಿಸಲು ಸಾಧ್ಯವಿಲ್ಲ ಎನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.