ದೇಶ

ಗುಜರಾತ್ ಉಳಿಸಿಕೊಂಡು ಹಿಮಾಚಲವನ್ನು ’ಕೈ’ ಯಿಂದ ಕಸಿದ ಕೇಸರಿ ಪಡೆ

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಹುತೇಕ ಮುಕ್ತಾಯ ಹಂತ ತಲುಪಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಚ್ಚಳವಾಗಿದೆ.

ಗುಜರಾತ್ ಉಳಿಸಿಕೊಂಡು ಹಿಮಾಚಲವನ್ನು ’ಕೈ’ ಯಿಂದ ಕಸಿದ ಕೇಸರಿ ಪಡೆ
ಬಿಜೆಪಿ
Published On :
ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಹುತೇಕ ಮುಕ್ತಾಯ ಹಂತ ತಲುಪಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಚ್ಚಳವಾಗಿದೆ. 
182 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಗುಜರಾತ್ ನಲ್ಲಿ ಬಿಜೆಪಿ ಈಗಾಗಲೇ 81 ಸ್ಥಾನಗಳಲ್ಲಿ ಗೆದ್ದಿದ್ದು 20 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ, ಕಾಂಗ್ರೆಸ್ ಪಕ್ಷ 55 ಕ್ಷೇತ್ರಗಳಲ್ಲಿ ಗೆದ್ದಿದ್ದು 23 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತರರು 2 ಕ್ಷೇತ್ರಗಳಲ್ಲಿ ಗೆದ್ದಿದ್ದು ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸರ್ಕಾರ ರಚಿಸಲು ಅಗತ್ಯವಿರುವ 92 ಸ್ಥಾನಗಳ ಸರಳ ಬಹುಮತದತ್ತ ಬಿಜೆಪಿ ಸಾಗುತ್ತಿದ್ದು, ಸತತ 6 ನೇ ಬಾರಿಗೆ ಗುಜರಾತ್ ನಲ್ಲಿ ಬಿಜೆಪಿ ಅಧಿಕಾರವನ್ನು ದಕ್ಕಿಸಿಕೊಂಡಿದೆ. 
ಇನ್ನು ಹಿಮಾಚಲ ಪ್ರದೇಶದಲ್ಲಿಯೂ ಬಿಜೆಪಿ ಬಹುಮತ ಗಳಿಸುವುದು ಸ್ಪಷ್ಟವಾಗಿದ್ದು, ಒಟ್ಟಾರೆ 68 ಕ್ಷೇತ್ರಗಳಲ್ಲಿ ಬಿಜೆಪಿ 18 ಕ್ಷೇತ್ರಗಳಲ್ಲಿ ಗೆದ್ದಿದ್ದು 26 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 6 ಕ್ಷೇತ್ರಗಳಲ್ಲಿ ಗೆದ್ದಿದ್ದು 14 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.