ಗುಜರಾತ್ ಸೋಲಿನ ನಡುವೆಯೂ ಕಾಂಗ್ರೆಸ್ ಬಲ ಹೆಚ್ಚಿಸಿದ ಅಲ್ಪೇಶ್ ಠಾಕೂರ್, ಜಿಗ್ನೇಶ್ ಮೇವಾನಿ ಗೆಲುವು!
ಇಡೀ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಆಭ್ಯರ್ಥಿಗಳು ಎಂದೇ ಗುರುತಿಸಿಕೊಂಡಿದ್ದ ಅಲ್ಪೇಶ್ ಠಾಕೂರ್, ಜಿಗ್ನೇಶ್ ಮೇವಾನಿ ನಿರೀಕ್ಷೆ ಮೀರಿ ಗೆಲುವು ದಾಖಲಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಗುಜರಾತ್ ನಲ್ಲಿ ಮತ್ತಷ್ಟು ಬಲ ತಂದಿದ್ದಾರೆ.

Published On :
ಅಹ್ಮದಾಬಾದ್: ಇಡೀ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಆಭ್ಯರ್ಥಿಗಳು ಎಂದೇ ಗುರುತಿಸಿಕೊಂಡಿದ್ದ ಅಲ್ಪೇಶ್ ಠಾಕೂರ್, ಜಿಗ್ನೇಶ್ ಮೇವಾನಿ ನಿರೀಕ್ಷೆ ಮೀರಿ ಗೆಲುವು ದಾಖಲಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಗುಜರಾತ್ ನಲ್ಲಿ ಮತ್ತಷ್ಟು ಬಲ ತಂದಿದ್ದಾರೆ.
ಗುಜರಾತ್ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದ್ದ ವಡಗಾಮ್ ನಲ್ಲಿ ಸ್ಪರ್ಧಿಸಿದ್ದ ಜಿಗ್ನೇಶ್ ಮೇವಾನಿ ಬನಸ್ಕಂತಾ ಜಿಲ್ಲೆಯ ವಡಗಾಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕೋಮವಾದ ಮತ್ತು ಬಿಜೆಪಿ ವಿರುದ್ಧ ಮಾತನಾಡುವ ಮೂಲಕವೇ ಸುದ್ದಿಗೆ ಗ್ರಾಸವಾಗಿದ್ದ ಮೇವಾನಿ, ಇತ್ತೀಚೆಗೆ ಬೆಂಗಳೂರಿನಲ್ಲಿ ಹತ್ಯೆಗೆ ಗುರಿಯಾಗಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಸಂಬಂಧ ನಡೆದಿದ್ದ ಹೋರಾಟದಲ್ಲಿ ಕಾಣಿಸಿಕೊಂಡು ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದರು ಅಲ್ಲದೆ ಅವರ ಹೇಳಿಕೆಗಳೂ ಕೂಡ ವಿವಾದದ ಸ್ವರೂಪ ಪಡೆದಿದ್ದವು.
ಇದೇ ಬಿಸಿಯಲ್ಲಿ ಗುಜರಾತ್ ಚುನಾವಣೆ ಕೂಡ ಘೋಷಣೆಯಾಗಿತ್ತು. ಈ ವೇಳೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿಗ್ನೇಶ್ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದ್ದು, ಮೇವಾನಿ ಒಟ್ಟು 63,172 ಮತಗಳನ್ನು ಪಡೆದಿದ್ದು, ಬಿಜೆಪಿಯ --- ಅವರನ್ನು 21042 ಮತಗಳ ಅಂತರದಿಂದ ಭರ್ಜರಿಯಾಗಿ ಮಣಿಸಿದ್ದಾರೆ. ದಲಿತ ಮತ್ತು ಇತರೆ ಹಿಂದುಳಿದ ಮತಗಳನ್ನು ಆಕರ್ಷಿಸುವಲ್ಲಿ ಜಿಗ್ನೇಶ್ ಮೇವಾನಿ ಯಶಸ್ವಿಯಾಗಿದ್ದಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಕಾಂಗ್ರೆಸ್ ಪಕ್ಷದ ಮತ್ತೋರ್ವ ಪ್ರಮುಖ ಸ್ಪರ್ಧಿ ಅಲ್ಪೇಶ್ ಠಾಕೂರ್ ಕೂಡ ರಾಧನ್ ಕ್ಷೇತ್ರದಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದು, ಈ ಕ್ಷೇತ್ರದಲ್ಲಿ ಅಲ್ಪೇಶ್ ಒಟ್ಟು 63,172 ಮತಗಳನ್ನು ಪಡೆದಿದ್ದಾರೆ. ಅಂತೆಯೇ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸೋಲಂಕಿ ಲಾವಿಂಗ್ಜಿ ಮುಲ್ಜಿಜಿ ಠಾಕೂರ್ ಅವರನ್ನು 13235 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.
ಒಟ್ಟಾರೆ ಕಾಂಗ್ರೆಸ್ ಪಕ್ಷದ ಅಸ್ತಿತ್ವದ ಪ್ರಶ್ನೆಯಾಗಿದ್ದ ಈ ಎರಡೂ ಕ್ಷೇತ್ರಗಳಲ್ಲೂ ಕೈ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ತಂದತ್ತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Gujaratಗುಜರಾತ್Election Commissionಚುನಾವಣಾ ಆಯೋಗಹಿಮಾಚಲ ಪ್ರದೇಶಚುನಾವಣಾ ಫಲಿತಾಂಶHimachal PradeshPoll ResultsBJP vs Congressಬಿಜೆಪಿ ವರ್ಸಸ್ ಕಾಂಗ್ರೆಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


