ದೇಶ

ಗುಜರಾತ್, ಹಿಮಾಚಲದ ಜನತೆ ವಂಶಾಡಳಿತ ವಿರುದ್ಧ ಮತ ಚಲಾಯಿಸಿದ್ದಾರೆ: ಅಮಿತ್ ಶಾ

ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಜನತೆ ಜಾತಿವಾದ ಮತ್ತು ವಂಶಾಡಳಿತ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು....

ಗುಜರಾತ್, ಹಿಮಾಚಲದ ಜನತೆ ವಂಶಾಡಳಿತ ವಿರುದ್ಧ ಮತ ಚಲಾಯಿಸಿದ್ದಾರೆ: ಅಮಿತ್ ಶಾ
ಅಮಿತ್ ಶಾ
Published On :
ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಜನತೆ ಜಾತಿವಾದ ಮತ್ತು ವಂಶಾಡಳಿತ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಸೋಮವಾರ ಹೇಳಿದ್ದಾರೆ.
ಎರಡು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದ ಬಳಿಕ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಗುಜರಾತ್‌ ಮತ್ತು ಹಿಮಾಚಲದ ಜನತೆ ಅಭಿವೃದ್ಧಿ ಪರವಾಗಿ ಮತ್ತು ವಂಶಾಡಳಿತದ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಪ್ರಧಾನಿ ಮೋದಿಯ ಅಭಿವೃದ್ಧಿಯ ಗೆಲುವು. ಪ್ರತಿಪಕ್ಷಗಳ ಒಡೆದು ಆಳುವ ನೀತಿಯನ್ನು ಜನ ಸಾರಾ ಸಗಟಾಗಿ ತಿರಸ್ಕಸಿದಿದ್ದಾರೆ ಎಂದಿದ್ದಾರೆ.
ದೇಶದ ಜನ ಸಾಧನೆಗೆ ಬೆಲೆ ಕೊಡುತ್ತಾರೆ ಎಂಬುದು ಈ ಎರಡು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಸಾಬೀತಾಗಿದೆ. ವಂಶಾಡಳಿತ ವಿರುದ್ಧ ಅಭಿವೃದ್ಧಿ ಗೆಲುವು ಸಾಧಿಸಿದೆ. ನಾವು ಗುಜರಾತ್‌ನಲ್ಲಿ ಕೆಲವು ಸ್ಥಾನಗಳನ್ನು ಕಳೆದುಕೊಂಡಿದ್ದೇವೆ ನಿಜ. ಆದರೆ ಇದಕ್ಕೆ ಪ್ರತಿಪಕ್ಷಗಳು ನಡೆಸಿದ ನೀಚತನ ರಾಜಕಾರಣ ಕಾರಣ ಎಂದು ಶಾ ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲೂ ನಾವು ಮತ್ತೆ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಬಿಜೆಪಿ ಅಧ್ಯಕ್ಷ, 2022ರ ವೇಳೆಗೆ ಮೋದಿಯವರ ಯುವ ಭಾರತದ ಕನಸು ನನಸಾಗಲಿದೆ ಎಂದರು.
ನಿರೀಕ್ಷೆಯಂತೆ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್‌ ಮುಕ್ತ ಭಾರತ ಮಾಡಲು ಹೊರಟಿರುವ ಕೇಸರಿ ಪಡೆಗೆ ಮತ್ತೊಂದು ಗೆಲುವು ದಕ್ಕಿದಂತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.