ದೇಶ

ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಎರಡು ರಾಜ್ಯದ ಜನತೆಗೆ ನಮಿಸುವೆ: ಪ್ರಧಾನಿ ಮೋದಿ

ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಎರಡು ರಾಜ್ಯಗಳಲ್ಲೂ ಬಿಜೆಪಿಗೆ...

ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಎರಡು ರಾಜ್ಯದ ಜನತೆಗೆ ನಮಿಸುವೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
Published On :
ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಎರಡು ರಾಜ್ಯಗಳಲ್ಲೂ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದ್ದು ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಎರಡು ರಾಜ್ಯದ ಜನತೆಗೆ ನಮಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. 
ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಅಭಿವೃದ್ಧಿಗೆ ಗೆಲವು, ಗುಜರಾತ್ ಗೆ ಗೆಲುವು. ಜಿಎಸ್ ಟಿ ಗೆಲುವು ಇಡೀ ದೇಶದ ಗೆಲವು. ನನ್ನ ಹೆಮ್ಮೆಯ ಗುಜರಾತ್ ಗೆ ಜೈಜೈ. ಇನ್ನೊಂದೆಡೆ ಅಭಿವೃದ್ಧಿ ಕಾರ್ಯಗಳಿಂದ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ. ಈ ಮೂಲಕ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಬಾವುಟ ಹಾರಿದೆ ಎಂದು ಟ್ವೀಟ್ ಮಾಡಿದ್ದಾರೆ. 
ಗುಜರಾತ್ ವಿಧಾನಸಭೆ ಚುನಾವಣೆ ಮೋದಿಗೆ ಕಠಿಣ ಸವಾಲಾಗಿತ್ತು. ಗುಜರಾತ್ ಚುನಾವಣೆ ಫಲಿತಾಂಶ ದೇಶದಲ್ಲಿ ಮುಂದೆ ನಡೆಯಲಿದ್ದ ಚುನಾವಣೆಗಳಿಗೆ ದಾರಿ ದೀಪವಾಗಲಿತ್ತು. ಈ ಹಿನ್ನೆಲೆಯಲ್ಲಿ ತವರು ನೆಲದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಿದ ಚುಕ್ಕಾಣಿ ಹಿಡುವಂತೆ ಮಾಡುವುದು ಮೋದಿಗೆ ದೊಡ್ಡ ಸವಾಲಾಗಿತ್ತು. 
ಇನ್ನು ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿರುವುದು ಬಿಜೆಪಿ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.