ಚುನಾವಣಾ ಫಲಿತಾಂಶ ನಿರಾಶೆ ತಂದಿಲ್ಲ. ಬದಲಿಗೆ ತೃಪ್ತಿ ಇದೆ: ರಾಹುಲ್ ಗಾಂಧಿ
ಗುಜರಾತ್ ಚುನಾವಣಾ ಫಲಿತಾಂಶ ತಮಗೆ ನಿರಾಸೆ ತಂದಿಲ್ಲ. ಬದಲಿಗೆ ಫಲಿತಾಂಶ ತೃಪ್ತಿ ತಂದಿದೆ ಎಂದು ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

Published On :
ನವದೆಹಲಿ: ಗುಜರಾತ್ ಚುನಾವಣಾ ಫಲಿತಾಂಶ ತಮಗೆ ನಿರಾಸೆ ತಂದಿಲ್ಲ. ಬದಲಿಗೆ ಫಲಿತಾಂಶ ತೃಪ್ತಿ ತಂದಿದೆ ಎಂದು ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಅತ್ತ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಹಲ್ ಗಾಂಧಿ ಅವರು, ಫಲಿತಾಂಶ ತೃಪ್ತಿ ತಂದಿದೆ. ನಿರಾಶೆ ಮೂಡಿಸಿಲ್ಲ ಎಂದು ಹೇಳಿದ್ದಾರೆ.
ಗುಜರಾತ್ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದ ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಚುನಾವಣಾ ಫಲಿತಾಂಶ ಇದಾಗಿದ್ದು, ಚುನಾವಣೆ ನಡೆಯುವ ಹೊತ್ತಿಗೆ ಅವರು ಎಐಸಿಸಿ ಉಪಾಧ್ಯಕ್ಷರಾಗಿದ್ದರು. ಅವರ ನೇತೃತ್ವದಲ್ಲಿ ಕಾಂಗ್ರೆಸ್ ಗುಜರಾತ್ ನಲ್ಲಿ ಬಹುಮತ ಗಳಿಸದಿದ್ದರೂ, ಹಿಂದಿನ ಚುನಾವಣೆಗಿಂತ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿದೆ.
ಇತ್ತೀಚಿನ ವರದಿಗಳ ಬಂದಾಗ ಗುಜರಾತ್ ನಲ್ಲಿ ಬಿಜೆಪಿ ಪಕ್ಷ ಒಟ್ಟು 92 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಇನ್ನೂ 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಂತೆಯೇ ಕಾಂಗ್ರೆಸ್ ಪಕ್ಷ 74 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Gujaratಗುಜರಾತ್Election Commissionಚುನಾವಣಾ ಆಯೋಗಹಿಮಾಚಲ ಪ್ರದೇಶಚುನಾವಣಾ ಫಲಿತಾಂಶHimachal PradeshBJP vs Congressಬಿಜೆಪಿ ವರ್ಸಸ್ ಕಾಂಗ್ರೆಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


