ಗುಜರಾತ್ ನಲ್ಲಿ ನಾವು ಸೋತು ಗೆದ್ದಿದ್ದೀವಿ: ಸಿದ್ದರಾಮಯ್ಯ
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಅಧಿಕಾರಕ್ಕೇರುತ್ತಿದೆಯಾದರೂ, ಕಳೆದ ಬಾರಿಗಿಂತ ಕನಿಷ್ಟ 13 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದ್ದು, ಕಾಂಗ್ರೆಸ್ ಉತ್ತಮ ಪೈಪೋಟಿ...

Published On :
ಯಾದಗಿರಿ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಅಧಿಕಾರಕ್ಕೇರುತ್ತಿದೆಯಾದರೂ, ಕಳೆದ ಬಾರಿಗಿಂತ ಕನಿಷ್ಟ 13 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದ್ದು, ಕಾಂಗ್ರೆಸ್ ಉತ್ತಮ ಪೈಪೋಟಿ ನೀಡಿದೆ.
ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಹಲವು ರಾಜಕೀಯ ನಾಯಕರು ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಗುಜರಾತ್ ನಲ್ಲಿ ನಾವು ಸೋತು ಗೆದ್ದಿದ್ದೀವಿ. ರಾಹುಲ್ ಗಾಂಧಿಯವರನ್ನು ಯುವನಾಯಕ ಎಂದು ಜನತೆ ಒಪ್ಪಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಮೋದಿ ಸರ್ಕಾರದ ನೀತಿಗಳನ್ನು ಜನತೆ ಒಪ್ಪಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


