ಫಲಿತಾಂಶ ಏನೇ ಇರಲಿ, ಕಾಂಗ್ರೆಸ್ ಜಯಶಾಲಿಯಾಗಿದೆ: ಅಶೋಕ್ ಗೆಹ್ಲೋಟ್
ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ ಏನೇ ಆಗಿದ್ದರೂ, ಕಾಂಗ್ರೆಸ್ ಜಯಶಾಲಿಯಾಗಿದೆ ಎಂದು ಗುಜರಾತ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅಶೋಕ್ ಗೆಹ್ಲೋಟ್ ಅವರು ಸೋಮವಾರ ಹೇಳಿದ್ದಾರೆ...

Published On :
ಅಹಮದಾಬಾದ್; ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ ಏನೇ ಆಗಿದ್ದರೂ, ಕಾಂಗ್ರೆಸ್ ಜಯಶಾಲಿಯಾಗಿದೆ ಎಂದು ಗುಜರಾತ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅಶೋಕ್ ಗೆಹ್ಲೋಟ್ ಅವರು ಸೋಮವಾರ ಹೇಳಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿದಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಾವು ಗುಜರಾತ್ ರಾಜ್ಯ ಪುತ್ರ ಎಂದು ಹೇಳಿಕೊಂಡಿದ್ದರು. ಆದರೆ, ಕಾಂಗ್ರೆಸ್ ಮಾತ್ರ ನೈಜತೆಯಿಂದ ಸ್ಪರ್ಧೆ ನಡೆಸಿತ್ತು ಎಂದು ಹೇಳಿದ್ದಾರೆ.
ಚುನಾವಣಾ ಕಣಕ್ಕಿಳಿದಾಗ ಕಾಂಗ್ರೆಸ್ ರೈತರು, ದಲಿತರು, ಹಿಂದುಳಿದವರು ಹಾಗೂ ವ್ಯಾಪಾರಿಗಳ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸಿತ್ತು. ಜನರೊಂದಿಗೆ ಮಾತುಕತೆ ನಡೆಸಿದ ಬಳಿಕ ನಾವು ನಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದೆವು ಎಂದು ತಿಳಿಸಿದ್ದಾರೆ.
ಗುಜರಾತ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸೋಲು ಅಥವಾ ಗೆಲವು ಕಾಂಗ್ರೆಸ್ ನೂತನ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಲಾಭವಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಇದೊಂದು ಕಾಲ್ಪನಿಕ ಪ್ರಶ್ನೆ. ಕಾಲ್ಪನಿಕವಾಗಿ ಪ್ರತಿಕ್ರಿಯೆ ನೀಡಬಾರದು. ಚುನಾವಣೆಯಲ್ಲಿ ಏನೇ ಫಲಿತಾಂಶ ಬಂದಿದ್ದರೂ, ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ನಿಜವಾಗಿ ಗೆಲವು ಸಾಧಿಸಿದ್ದಾರೆಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


