ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಮುಂದುವರೆದಿರುವಂತೆಯೇ ಕಾಲ್ಕೆರೆದು ಬರುವ ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕುತ್ತಿದೆ.

Published On :
ಶೋಪಿಯಾನ್: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಮುಂದುವರೆದಿರುವಂತೆಯೇ ಕಾಲ್ಕೆರೆದು ಬರುವ ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕುತ್ತಿದೆ.
ಅದೇ ರೀತಿ ಕಳೆದ ರಾತ್ರಿ ಶೋಪಿಯಾನ್ ನಲ್ಲಿ ಅವಿತು ದಾಳಿಗೆ ಸಂಚು ರೂಪಿಸುತ್ತಿದ್ದ ಇಬ್ಬರು ಉಗ್ರಗಾಮಿಗಳನ್ನು ಭಾರತೀಯ ಸೇನೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಹತ್ಯೆಗೈದಿದ್ದಾರೆ. ಶೋಪಿಯಾನ್ ಜಿಲ್ಲೆಯ ಕೆಲ್ಲರ್ ತೆಹ್ಸೀಲ್ ನ ಬತ್ಮುರ್ರನ್ ಗ್ರಾಮದಲ್ಲಿ ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭಾರತೀಯ ಸೇನೆಯ 44 ರಾಷ್ಟ್ರೀಯ ರೈಫಲ್ಸ್ ನ ಯೋಧರು, ಜಮ್ಮು ಮತ್ತು ಕಾಶ್ಮೀರ ವಿಶೇಷ ಕಾರ್ಯಾಚರಣೆ ಪಡೆ ಮತ್ತು ಕೇಂದ್ರೀಯ ಮೀಸಲು ಪಡೆ (ಸಿಆರ್ ಪಿಎಫ್)ಯ 14ನೇ ಬೆಟಾಲಿಯನ್ ಪಡೆಯ ಯೋಧರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಕೊಂದು ಹಾಕಿದ್ದಾರೆ.
ಮೃತ ಉಗ್ರರೆಲ್ಲರೂ ಜೈಶ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರಿದವರಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅವಿತಿರುವ ಶಂಕೆ ಮೇರೆಗೆ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.
ಇನ್ನು ಈ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರು 200ಕ್ಕೂ ಅಧಿಕ ಉಗ್ರಗಾಮಿಗಳನ್ನು ಕಾರ್ಯಾಚರಣೆಯಲ್ಲಿ ಕೊಂದು ಹಾಕಿದ್ದಾರೆ ಎಂದು ಸೇನಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಜಮ್ಮು ಮತ್ತು ಕಾಶ್ಮೀರJammu and KashmirTerrorismಭಯೋತ್ಪಾದನೆಭಾರತೀಯ ಸೇನೆShopian encounterಶೋಪಿಯಾನ್ ಎನ್ ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


