ಇಟಲಿಯಲ್ಲಿ ಮದುವೆ: ವಿರಾಟ್ ಕೊಹ್ಲಿ 'ದೇಶಪ್ರೇಮ' ಪ್ರಶ್ನಿಸಿದ ಬಿಜೆಪಿ ಶಾಸಕ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕಳೆದ ವಾರ ಇಟಲಿಯಲ್ಲಿ ವಿವಾಹ ಬಂಧನಕ್ಕೆ ಕಾಲಿಟ್ಟಿದ್ದು...

Published On :
ಗುನಾ(ಮಧ್ಯಪ್ರದೇಶ): ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕಳೆದ ವಾರ ಇಟಲಿಯಲ್ಲಿ ವಿವಾಹ ಬಂಧನಕ್ಕೆ ಕಾಲಿಟ್ಟಿದ್ದು, ಸ್ವದೇಶ ಬಿಟ್ಟು ವಿದೇಶದಲ್ಲಿ ಮದುವೆಯಾಗಿರುವುದಕ್ಕೆ ಬಿಜೆಪಿ ಶಾಸಕ ಕೊಹ್ಲಿಯ ದೇಶಪ್ರೇಮವನ್ನು ಪ್ರಶ್ನಿಸಿದ್ದಾರೆ.
ವಿರಾಟ್ ಕೊಹ್ಲಿ ದೇಶಪ್ರೇಮಿಯಲ್ಲ ಹೀಗಾಗಿ ತನ್ನ ಮದುವೆಯನ್ನು ಇಟಲಿಯಲ್ಲಿ ಮಾಡಿಕೊಂಡಿದ್ದಾರೆ ಎಂದು ಮಧ್ಯಪ್ರದೇಶದ ಬಿಜೆಪಿ ಶಾಸಕ ಪನ್ನಾಲಾಲ್ ಶಕ್ಯ ಪ್ರಶ್ನಿಸುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಭಗವಂತ ರಾಮ, ಕೃಷ್ಣರೇ ಭರತ ಭೂಮಿಯಲ್ಲಿ ವಿವಾಹವಾಗಿದ್ದರು. ಇಂತಹ ಪವಿತ್ರ ಭೂಮಿಯಲ್ಲಿ ವಿವಾಹವಾಗುವುದನ್ನು ಬಿಟ್ಟು ಇಟಲಿಯಲ್ಲಿ ಮದುವೆಯಾಗಿದ್ದಾರೆ. ಹೀಗಾಗಿ ಅವರು ಓರ್ವ ದೇಶಪ್ರೇಮಿಯಾಗಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತVirat Kohliವಿರಾಟ್ ಕೊಹ್ಲಿಮದುವೆItalyಇಟಲಿBJP MLAಬಿಜೆಪಿ ಶಾಸಕKrishnarammarriedanti-nationalಕೃಷ್ಣದೇಶದ್ರೋಹಿರಾಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


