ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ವಿಶೇಷ ಕೋರ್ಟ್: ಸಂಸದ, ಶಾಸಕರ ವಿರೋಧ, ಸರ್ಕಾರದಿಂದ ಸಮರ್ಥನೆ
ಜನಪ್ರತಿನಿಧಿಗಳ ಕ್ರಿಮಿನಲ್ ಅಪರಾಧಗಳ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವುದಕ್ಕೆ ಜನಪ್ರತಿನಿಧಿ(ಸಂಸದರು, ಶಾಸಕರು)ಗಳಿಂದಲೇ ವಿರೋಧ ವ್ಯಕ್ತವಾಗುತ್ತಿದೆ.

Published On :
ನವದೆಹಲಿ: ಜನಪ್ರತಿನಿಧಿಗಳ ಕ್ರಿಮಿನಲ್ ಅಪರಾಧಗಳ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವುದಕ್ಕೆ ಜನಪ್ರತಿನಿಧಿ(ಸಂಸದರು, ಶಾಸಕರು)ಗಳಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ಆದರೆ ವಿಶೇಷ ಕೋರ್ಟ್ ಸ್ಥಾಪನೆ ಮಾಡುವುದನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಮರ್ಥಿಸಿಕೊಂಡಿದೆ.
2014 ರಿಂದ ಈಗಾಗಲೇ ಜನಪ್ರತಿನಿಧಿಗಳ ವಿರುದ್ಧ 1,581 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಳ ವಿಚಾರಣೆ ನಡೆಸಲು ಪ್ರಾರಂಭಿಕ ಹಂತದಲ್ಲಿ 12 ಕೋರ್ಟ್ ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಸರ್ಕಾರದ ತೀರ್ಮಾನದ ಬಗ್ಗೆ ನಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ನರೇಶ್ ಅಗರ್ವಾಲ್ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಸಮಾಜಕ್ಕೆ ಮೇಲ್ಪಂಕ್ತಿ ಹಾಕಿಕೊಡುವಲ್ಲಿ ಜನಪ್ರತಿನಿಧಿಗಳು ಮುಂದಿರಬೇಕು ಎಂದು ಹೇಳಿದ್ದಾರೆ.
ನಾವು ಜನಪ್ರತಿನಿಧಿಗಳು, ನಮ್ಮ ವಿರುದ್ಧದ ಆರೋಪದಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡಿವೆ ಎಂದು ಆರೊಪಿಸಬಹುದು, ನಮ್ಮ ವಿರುದ್ಧ ಆರೋಪ ಕೇಳಿಬಂದಾಗ ತ್ವರಿತ ವಿಚಾರಣೆ ನಡೆಯಬೇಕು ಎಂದು ಜೇಟ್ಲಿ ವಿಶೇಷ ನ್ಯಾಯಾಲಯಗಳ ಸ್ಥಾಪನೆಯನ್ನು ಸಮರ್ಥಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


