ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಸ್ಮೃತಿ ಇರಾನಿ?
ಗುಜರಾತ್ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿದ್ದು, ಎರಡೂ ರಾಜ್ಯಗಳಿಗೆ ಮುಖ್ಯಮಂತ್ರಿಗಳ ಆಯ್ಕೆ ತಯಾರಿ ನಡೆದಿದೆ.

Published On :
ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿದ್ದು, ಎರಡೂ ರಾಜ್ಯಗಳಿಗೆ ಮುಖ್ಯಮಂತ್ರಿಗಳ ಆಯ್ಕೆ ತಯಾರಿ ನಡೆದಿದೆ.
ಪ್ರತಿ ರಾಜ್ಯವನ್ನು ಗೆದ್ದಾಗ ಮುಖ್ಯಮಂತ್ರಿಗಳ ಆಯ್ಕೆ ವಿಷಯದಲ್ಲಿ ಅಚ್ಚರಿಯನ್ನು ನೀಡುವ ಬಿಜೆಪಿ ಈ ಬಾರಿ ಗುಜರಾತ್ ನಲ್ಲಿಯೂ ಅಚ್ಚರಿಯ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಗಾದಿಗೆ ಆಯ್ಕೆ ಮಾಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ ಗುಜರಾತ್ ರಾಜ್ಯವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುತ್ತಿರುವ ಕೇಂದ್ರ ಜವಳಿ ಖಾತೆ, ಮಾಹಿತಿ ಹಾಗೂ ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ ಅವರನ್ನು ಗುಜರಾತ್ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಸಾಧ್ಯತೆಗಳಿವೆ.
ಗುಜರಾತ್ ನಲ್ಲಿ ಚುನಾವಣೆ ಸಮಯದಲ್ಲಿ ನೀಡಲಾಗಿರುವ ಭರವಸೆಗಳನ್ನು ಸಮರ್ಥವಾಗಿ ಜಾರಿಗೆ ತರಬಲ್ಲ ಅಭ್ಯರ್ಥಿಯನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲು ಕೇಂದ್ರ ಬಿಜೆಪಿ ನಾಯಕರು ನಿರ್ಧರಿಸಿದ್ದು, ಸ್ಮೃತಿ ಇರಾನಿ ಅವರಲ್ಲಿರುವ ನಾಯಕತ್ವದ ಗುಣಗಳು ಗುಜರಾತ್ ನಲ್ಲಿ ಬಿಜೆಪಿ ನೀಡಿರುವ ಭರವಸೆಗಳ ಈಡೇರಿಕೆಗೆ ಸಹಕಾರಿಯಾಗಲಿರುವುದರಿಂದ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಸ್ಮೃತಿ ಇರಾನಿ ಅವರು ಮಾಧ್ಯಮ ವರದಿಗಳನ್ನು ತಳ್ಳಿಹಾಕಿದ್ದು ಮುಖ್ಯಮಂತ್ರಿ ಹುದ್ದೆ ರೇಸ್ ನಲ್ಲಿ ನಾನು ಇಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿChief Ministerಮುಖ್ಯಮಂತ್ರಿSmriti Iraniಸ್ಮೃತಿ ಇರಾನಿGujarat elections 2017ಗುಜರಾತ್ ಚುನಾವಣೆ-2017
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


