ದೇಶ

ಆರ್ ಕೆ ನಗರ ಉಪಚುನಾವಣೆಗೂ ಮುನ್ನ ಟಿಟಿವಿ ಬಣದಿಂದ ಜಯಲಲಿತಾ ಆಸ್ಪತ್ರೆಯಲ್ಲಿರುವ ವಿಡಿಯೋ ಬಿಡುಗಡೆ

ತಮಿಳುನಾಡಿನ ಆರ್.ಕೆ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಇನ್ನು ಒಂದೇ ದಿನ ಬಾಕಿ ಇದ್ದು, ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಬಣದಿಂದ ಜಯಲಲಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಡಿಯೋ..

ಆರ್ ಕೆ ನಗರ ಉಪಚುನಾವಣೆಗೂ ಮುನ್ನ ಟಿಟಿವಿ ಬಣದಿಂದ ಜಯಲಲಿತಾ ಆಸ್ಪತ್ರೆಯಲ್ಲಿರುವ ವಿಡಿಯೋ ಬಿಡುಗಡೆ
ಜಯಲಲಿತಾ ದಾಖಲಾಗಿದ್ದ ಅಪೋಲೋ ಆಸ್ಪತ್ರೆ
Published On :
ಚೆನ್ನೈ: ತಮಿಳುನಾಡಿನ ಆರ್.ಕೆ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಇನ್ನು ಒಂದೇ ದಿನ ಬಾಕಿ ಇದ್ದು, ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಬಣದಿಂದ ಜಯಲಲಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಡಿಯೋ ಬಿಡುಗಡೆಯಾಗಿದೆ.
ಟಿಟಿವಿ ಬೆಂಬಲಿಗ ವೆಟ್ರಿವೇಲ್ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ವಿಡಿಯೋದಲ್ಲಿ ಜಯಲಲಿತಾ ಜ್ಯೂಸ್ ಕುಡಿಯುತ್ತಿರುವ ದೃಶ್ಯಗಳು ದಾಖಲಾಗಿವೆ. ವಿಡಿಯೋ ಚಿತ್ರೀಕರಿಸಿರುವ ದಿನಾಂಕದ ಬಗ್ಗೆ ಸ್ಪಷ್ಟವಾದ ಮಾಹಿತಿ ಸಿಕ್ಕಿಲ್ಲ. ಆದರೆ ವೆಟ್ರಿವೇಲ್ ಪ್ರಕಾರ ಜಯಲಲಿತಾ ಅವರನ್ನು ಐಸಿಯುನಿಂದ ವಾರ್ಡ್ ಗೆ ಸ್ಥಳಾಂತರಿಸಿದಾಗ ಶಶಿಕಲಾ ರೆಕಾರ್ಡ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. 
ಜಯಲಲಿತಾ ಅವರ ಸಾವಿನ ಬಗ್ಗೆ ಶಶಿಕಲಾ ವಿರುದ್ಧ ಆರೋಪ ಕೇಳಿಬಂದಿದ್ದು, ತಮ್ಮ ವಿರುದ್ಧದ ಆರೋಪವನ್ನು ಅಲ್ಲಗಳೆಯಲು ಈ ವಿಡಿಯೋ ಬಿಡುಗಡೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.