ಅನುಮತಿ ಇಲ್ಲದೇ ರೋಡ್ ಶೋ: ಹಾರ್ದಿಕ್ ಪಟೇಲ್ ವಿರುದ್ಧ 2 ಎಫ್ ಐಆರ್
ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಅಹ್ಮದಾಬಾದ್ ಪೊಲೀಸರು ಪಟೇಲ್ ಸಮುದಾಯದ ಹೋರಾಟಗಾರ ಹಾರ್ದಿಕ್ ಪಟೇಲ್ ಗೆ ಶಾಕ್ ನೀಡಿದ್ದು, 2 ಪ್ರತ್ಯೇಕ ಎಫ್ ಐಆರ್ ದಾಖಲಿಸಿದ್ದಾರೆ.

Published On :
ಅಹ್ಮದಾಬಾದ್: ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಅಹ್ಮದಾಬಾದ್ ಪೊಲೀಸರು ಪಟೇಲ್ ಸಮುದಾಯದ ಹೋರಾಟಗಾರ ಹಾರ್ದಿಕ್ ಪಟೇಲ್ ಗೆ ಶಾಕ್ ನೀಡಿದ್ದು, 2 ಪ್ರತ್ಯೇಕ ಎಫ್ ಐಆರ್ ದಾಖಲಿಸಿದ್ದಾರೆ.
ಈ ಹಿಂದೆ ಗುಜರಾತ್ ಚುನಾವಣಾ ಸಂದರ್ಭದಲ್ಲಿ ಹಾರ್ದಿಕ್ ಪಟೇಲ್ ಮತ್ತು ಅವರ ಬೆಂಬಲಿಗರು ಅನುಮತಿ ಇಲ್ಲದೇ ರೋಡ್ ಶೋ ನಡೆಸಿದ ಸಂಬಂಧ ಅಹ್ಮದಾಬಾದ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಡಿಸೆಂಬರ್ 11ರಂದು ಹಾರ್ದಿಕ್ ಪಟೇಲ್ ಅಹ್ಮದಾಬಾದ್ ಹೊರವಲಯದಲ್ಲ ಭೋಪಾಲ್ ಪ್ರದೇಶದಲ್ಲಿ ರೋಡ್ ಶೋ ನಡೆಸಿದ್ದರು. ಆದರೆ ಈ ರೋಡ್ ಶೋಗೆ ಪೊಲೀಸರಿಂದ ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಹಾರ್ದಿಕ್ ಮತ್ತು ಅವರ 50 ಮಂದಿ ಬೆಂಬಲಿಗರ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಪೊಲೀಸರ ಆದೇಶ ತಿರಸ್ಕರಿಸಿ ರೋಡ್ ಶೋ ನಡೆಸಿದ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಗೋಲ್ಹಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
AhmadabadElection Commissionಚುನಾವಣಾ ಆಯೋಗಅಹ್ಮದಾಬಾದ್Hardik Patelಹಾರ್ದಿಕ್ ಪಟೇಲ್ಗುಜರಾತ್ ಚುನಾವಣಾ ಫಲಿತಾಂಶGujarat Election Results
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


