2ಜಿ ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಲು ಬಿಜೆಪಿ ಸಂಚು: ಆಮ್ ಆದ್ಮಿ ಪಕ್ಷ
2 ಜಿ ಹಗರಣದ ತೀರ್ಪಿನ ಬಗ್ಗೆ ಆಮ್ ಆದ್ಮಿ ಪಕ್ಷ ಪ್ರತಿಕ್ರಿಯೆ ನೀಡಿದ್ದು, ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಲು ಬಿಜೆಪಿ ಷಡ್ಯಂತ್ರ ರೂಪಿಸಿದೆ ಎಂದು ಆರೋಪಿಸಿದೆ.

Published On :
ನವದೆಹಲಿ: 2 ಜಿ ಹಗರಣದ ತೀರ್ಪಿನ ಬಗ್ಗೆ ಆಮ್ ಆದ್ಮಿ ಪಕ್ಷ ಪ್ರತಿಕ್ರಿಯೆ ನೀಡಿದ್ದು, ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಲು ಬಿಜೆಪಿ ಷಡ್ಯಂತ್ರ ರೂಪಿಸಿದೆ ಎಂದು ಆರೋಪಿಸಿದೆ.
ತೀರ್ಪಿನ ಬಗ್ಗೆ ಟ್ವೀಟ್ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಬಿಐ ಹಗರಣದ ಆರೋಪಿಗಳ ಅಪರಾಧವನ್ನು ಸಾಬೀತುಪಡಿಸುವಲ್ಲಿ ವಿಫಲಗೊಂಡಿದೆ. ಸಿಬಿಐ ಏಕೆ ವಿಫಲಗೊಂಡಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಈಗ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
2ಜಿ ಹಗರಣ ದೇಶದ ಅತಿ ದೊಡ್ಡ ಹಗರಣ, ಯುಪಿಎ ಸರ್ಕಾರವನ್ನು ಜನರು ತಿರಸ್ಕರಿಸಿದ್ದೂ ಇದೇ ಕಾರಣಕ್ಕಾಗಿ. ಉದ್ದೇಶಪೂರ್ವಕವಾಗಿಯೇ ಸಿಬಿಐ ಈ ಪ್ರಕರಣದಲ್ಲಿ ದುರ್ಬಲ ವಾದ ಮಂಡಿಸಿದೆಯೇ, ಜನರಿಗೆ ಉತ್ತರ ಬೇಕಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


