ರೋಹಿಣಿ ಅಶ್ರಮದ ಡೋಂಗಿ ಬಾಬಾನನ್ನು ಹುಡುಕಿ: ಸಿಬಿಐಗೆ ಹೈಕೋರ್ಟ್ ಸೂಚನೆ!
40 ಮಹಿಳೆಯರನ್ನು ತನ್ನ ಆಶ್ರಮದಲ್ಲಿ ಬಂಧಿಯಾಗಿಟ್ಟುಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದ ಕಾಮಿಸ್ವಾಮಿಯನ್ನು ಕೂಡಲೇ ವಶಕ್ಕೆ ಪಡೆಯುವಂತೆ ದೆಹಲಿ ಹೈಕೋರ್ಟ್ ಸಿಬಿಐ ಅಧಿಕಾರಿಗಳಿಗೆ ಶುಕ್ರವಾರ ಸೂಚನೆ ನೀಡಿದೆ.

Published On :
ನವದೆಹಲಿ: 40 ಮಹಿಳೆಯರನ್ನು ತನ್ನ ಆಶ್ರಮದಲ್ಲಿ ಬಂಧಿಯಾಗಿಟ್ಟುಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದ ಕಾಮಿಸ್ವಾಮಿಯನ್ನು ಕೂಡಲೇ ವಶಕ್ಕೆ ಪಡೆಯುವಂತೆ ದೆಹಲಿ ಹೈಕೋರ್ಟ್ ಸಿಬಿಐ ಅಧಿಕಾರಿಗಳಿಗೆ ಶುಕ್ರವಾರ ಸೂಚನೆ ನೀಡಿದೆ.
ದೆಹಲಿಯ ರೋಹಿಣಿ ಆಶ್ರಮದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಇತ್ತೀಚೆಗೆ 40 ಮಂದಿ ಮಹಿಳೆಯರನ್ನು ಬಿಡುಗಡೆ ಮಾಡಿದ್ದರು. ಈ ವೇಳೆ ತನಿಖಾಧಿಕಾರಿಗಳಿಗೆ ಕಾಮಿಸ್ವಾಮಿ ವೀರೇಂದ್ರ ದೀಕ್ಷಿತ್ ನ ಕುರಿತ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ಈ ಕಾಮಿಸ್ವಾಮಿ 16 ಸಾವಿರ ಮಹಿಳೆಯರೊಂದಿಗೆ ಹಾಸಿಗೆ ಹಂಚಿಕೊಳ್ಳಬೇಕು ಎಂದು ಬಯಸಿದ್ದನಂತೆ. ಈ ಬಗ್ಗೆ ಸ್ವತಃ ಆತನ ವಶದಲ್ಲಿದ್ದು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಅಧಿಕಾರಿಗಳೊಂದಿಗೆ ಮಾಹಿತಿ ನೀಡಿದ್ದು, ಇದೀಗ ಕಾಮಿಸ್ವಾಮಿ ನಾಪತ್ತೆಯಾಗಿದ್ದು ಆತನ ಬಂಧನಕ್ಕಾಗಿ ಪೊಲೀಸ್ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಹೈಕೋರ್ಟ್ ತನಿಖಾ ಆಯೋಗವನ್ನು ರಚನೆ ಮಾಡಿದ್ದು, ರೋಹಿಣಿ ಆಶ್ರಮದ ಕುರಿತು ಕೂಲಂಕುಷ ತನಿಖೆ ನಡೆಸುವಂತೆ ಆದೇಶ ನೀಡಿದೆ. ಅಲ್ಲದೆ ಕೂಡಲೇ ತಂಡವನ್ನು ರಚನೆ ಮಾಡಿ ಈ ಡೋಂಗಿ ಬಾಬಾನನ್ನು ಹುಡುಕಿ ವಶಕ್ಕೆ ಪಡೆಯುವಂತೆ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiಅಪಹರಣCBIಸಿಬಿಐDelhi Policeದೆಹಲಿ ಪೊಲೀಸ್ಲೈಂಗಿಕ ಅಪರಾಧAbductionSexual CrimeRohini ashramರೋಹಣಿ ಆಶ್ರಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


