ಮೇವು ಹಗರಣ: ಲಾಲು ಪ್ರಸಾದ್ ಯಾದವ್ ಕೇಸಿನ ತೀರ್ಪು ಇಂದು
ಆರ್'ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಆರೋಪಿಯಾಗಿರುವ ಬಹುಕೋಟಿ ಮೇವು ಹಗರಣದ ವಿವಿಧ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ, ಈ ಪೈಕಿ ಒಂದು ಪ್ರಕರಣದ ತೀರ್ಪನ್ನು ಶನಿವಾರ ಪ್ರಕಟಿಸಲಿದೆ...

Published On :
ರಾಂಚಿ: ಆರ್'ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಆರೋಪಿಯಾಗಿರುವ ಬಹುಕೋಟಿ ಮೇವು ಹಗರಣದ ವಿವಿಧ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ, ಈ ಪೈಕಿ ಒಂದು ಪ್ರಕರಣದ ತೀರ್ಪನ್ನು ಶನಿವಾರ ಪ್ರಕಟಿಸಲಿದೆ.
ಮೇವು ಖರೀದಿಗೆ ಮೀಸಲಿರಿಸಿದ್ದ ರೂ.90 ಕೋಟಿಗಳನ್ನು ದೇವಗಢ ಖಜಾನೆಯಿಂದ ಅಕ್ರಮವಾಗಿ ಪಡೆದ ಮಾಡಿಕೊಂಡ ಆರೋಪ ಲಾಲು ಪ್ರಸಾದ್ ಯಾದವ್, ಮಾಜಿ ಮುಖ್ಯಮಂತ್ರಿ ಜಗನ್ನಾಥ ಮಿಶ್ರಾ ಹಾಗೂ ಇತರರ ಮೇಲಿದೆ.
ಮೇವು ಹಗರಣದ ಒಂದು ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರು ದೋಷಿ ಎಂದು 2013ರಲ್ಲೇ ತೀರ್ಪು ಹೊರಬಿದ್ದಿತ್ತು. ಬಳಿಕ ಲಾಲು ಅವರು ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಸುಪ್ರೀಂಕೋರ್ಟ್ ನೀಡಿದ್ದ ಜಾಮೀನಿನ ಮೇರೆಗೆ ಅವರು ಇದೀಗ ಹೊರಗಿದ್ದಾರೆ.
ನ್ಯಾಯಾಲಯದ ತೀರ್ಪಿನ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಲಾಲು ಅವರು, ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ನನಗೆ ನ್ಯಾಯ ದೊರಕುವ ವಿಶ್ವಾಸವಿದೆ. ನ್ಯಾಯಾಲಯದಲ್ಲಿ ದೇಶದಲ್ಲಿರುವ ಪ್ರತೀಯೊಬ್ಬರು ನ್ಯಾಯವನ್ನು ಪಡೆದುಕೊಳ್ಳುದ್ದಾರೆ. ನ್ಯಾಯಾಲಯದ ತೀರ್ಪೀನ ಬಗ್ಗೆ ನನಗೆ ಯಾವುದೇ ಚಿಂತೆಯಿಲ್ಲ ಎಂದು ಹೇಳಿದ್ದಾರೆ.
ನನ್ನ ವಿರುದ್ಧ ಜನರಲ್ಲಿ ತಪ್ಪು ತಿಳುವಳಿಕೆಗಳನ್ನು ಸೃಷ್ಟಿಸಲು ಸಾಕಷ್ಟು ಯತ್ನಗಳು ನಡೆಯುತ್ತಿವೆ. ಇದರ ಹಿಂದೆ ಬಿಜೆಪಿ ಹಾಗೂ ಆರ್'ಎಸ್ಎಸ್ ನಾಯಕರಿದ್ದಾರೆ. ಆದರೆ, ಇವುಗಳಿಗೆ ನಾನು ಹೆದರುವುದಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


