ದೇಶ

ಸೋಮನಾಥ ದೇವಾಲಯಕ್ಕೆ ರಾಹುಲ್ ಭೇಟಿ, ಪಕ್ಷದ ನಾಯಕರೊಂದಿಗೆ ಸಭೆ

ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಮೊದಲ ಬಾರಿಗೆ ರಾಹುಲ್ ಗಾಂಧಿ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದು, ನಂತರ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.

ಸೋಮನಾಥ ದೇವಾಲಯಕ್ಕೆ ರಾಹುಲ್ ಭೇಟಿ, ಪಕ್ಷದ ನಾಯಕರೊಂದಿಗೆ ಸಭೆ
ರಾಹುಲ್ ಗಾಂಧಿ
Published On :
ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಮೊದಲ ಬಾರಿಗೆ ರಾಹುಲ್ ಗಾಂಧಿ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದು, ನಂತರ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. 
ದೇವಾಲಯಕ್ಕೆ ಭೇಟಿ ನೀಡಿರುವ ರಾಹುಲ್ ಗಾಂಧಿ, ದೇವಾಲಯ ಧ್ವಜವನ್ನೂ ಅರ್ಪಿಸಿದ್ದಾರೆ. ಕಳೆದ ಬಾರಿ ಗುಜರಾತ್  ವಿಧಾನಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪ್ರವೇಶ ಪುಸ್ತಕದಲ್ಲಿ ಹೆಸರನ್ನು ನಮೂದಿಸಿ ದೇವಾಲಯಕ್ಕೆ ತೆರಳಿದ್ದು ವಿವಾದಕ್ಕೀಡಾಗಿತ್ತು.
ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಅಹಮದಾಬಾದ್ ಗೆ ತೆರಳಿರುವ ರಾಹುಲ್ ಗಾಂಧಿ ಪಕ್ಷದ ನಾಯಕರು, ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿದ್ದಾರೆ, ಪಕ್ಷದ ಸಭೆಯಲ್ಲಿ ಗುಜರಾತ್ ನಲ್ಲಿ ಕಾಂಗ್ರೆಸ್ ಸೋಲುವುದಕ್ಕೆ ಕಾರಣವಾದ ಅಂಶಗಳು ಚರ್ಚೆಯಾಗಿದ್ದು, ಅಲ್ಪೇಶ್ ಠಾಕೂರ್ ನಂತಹ ಹೊರಗಿನ ನಾಯಕರನ್ನು ಪಕ್ಷಕ್ಕೆ ಕರೆ ತಂದಿದ್ದು ಹೊಡೆತ ಬಿದ್ದಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.