ರಾಜಸ್ತಾನ: ನದಿಗೆ ಉರುಳಿ ಬಿದ್ದ ಬಸ್; 32 ಸಾವು, ಹಲವರಿಗೆ ಗಾಯ
ಸೇತುವೆ ಮೇಲೆ ಹೋಗುತ್ತಿದ್ದ ಪ್ರಯಾಣಿಕ ಬಸ್ ವೊಂದು ನದಿಗೆ ಉರುಳಿಬಿದ್ದ ಪರಿಣಾಮ 32 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ರಾಜಸ್ತಾನದಲ್ಲಿ ಶನಿವಾರ ನಡೆದಿದೆ...

Published On :
ಜೈಪುರ: ಸೇತುವೆ ಮೇಲೆ ಹೋಗುತ್ತಿದ್ದ ಪ್ರಯಾಣಿಕ ಬಸ್ ವೊಂದು ನದಿಗೆ ಉರುಳಿಬಿದ್ದ ಪರಿಣಾಮ 32 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ರಾಜಸ್ತಾನದಲ್ಲಿ ಶನಿವಾರ ನಡೆದಿದೆ.
ರಾಜಸ್ತಾನದ ಸವೈ ಮಧೋಪುರ್ ಜಿಲ್ಲೆಯ ದುಬಿ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.
ಸೇತುವೆ ಮೇಲೆ ಬಸ್ಸನ್ನು ಚಾಲನೆ ಮಾಡುತ್ತಿದ್ದ ಚಾಲಕ ಇದ್ದಕ್ಕಿದ್ದಂತೆ ಬಸ್ಸಿನ ಮೇಲಿದ್ದ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ಈ ವೇಳೆ ಬಸ್ಸು ನದಿಗೆ ಉರುಳಿ ಬಿದ್ದಿದೆ. ಸುದ್ದಿ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಪ್ರಧಾನಿ ಮೋದಿ ಸಂತಾಪ
ರಾಜಸ್ತಾನ ರಾಜ್ಯದಲ್ಲಿ ಸಂಭವಿಸಿದ ಬಸ್ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪವನ್ನು ಸೂಚಿಸಿದ್ದಾರೆ.
ದುರಂತ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಮೃತರ ಕುಟುಂಬಸ್ಥರ ಕುರಿತಂತೆ ಸಂತಾಪವನ್ನು ಸೂಚಿಸುತ್ತೇನೆಂದು ಹೇಳಿದ್ದಾರೆ.
ಪ್ರಕರಣ ಕುರಿತಂತೆ ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಅವಲೋಕನ ನಡೆಸುತ್ತಿದೆ. ದುರಂತದಿಂದ ಸಂಕಷ್ಟದಲ್ಲಿರುವ ಜನರಿಗೆ ರಕ್ಷಣಾ ಕಾರ್ಯಾಚರಣೆ ವೇಳೆ ಸಿಬ್ಬಂದಿಗಳು ಎಲ್ಲಾ ರೀತಿಯ ಪರಿಹಾರವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಸವೈ ಮಧೋಪುರದ ಎಸ್'ಪಿ ಮಮ್ಮನ್ ಸಿಂಗ್ ಅವರು, ದುರಂತದಲ್ಲಿ ಈ ವರೆಗೂ 32 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಐವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ. ಘಟನೆಯಲ್ಲಿ ಸಾವನ್ನಪ್ಪಿದ 10 ಮಂದಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಳ ಬಳಿಕ ಕುಟುಂಬ ಸದಸ್ಯರಿಗೆ ನೀಡಲಾಗಿದೆ. ದುರಂತದಲ್ಲಿ ಸಾವನ್ನಪ್ಪಿದ ಜನರು ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ತಾನ ಹಾಗೂ ಅಸ್ಸಾಂ ಮೂಲದವರಾಗಿದ್ದಾರೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


