ತುರ್ತು ಪರಿಸ್ಥಿತಿಯಲ್ಲಿ ಜೈಲು ಸೇರಿದ್ದ ಸ್ವಯಂ ಸೇವಕರಿಗೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟ
ತುರ್ತು ಪರಿಸ್ಥಿತಿಯಲ್ಲಿ ಅಂದಿನ ಇಂದಿರಾ ಗಾಂಧಿ ನೇತೃತ್ವದ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದ ಸ್ವಯಂ ಸೇವಕರಿಗೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟ ನೀಡಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ.

Published On :
ನಾಗ್ಪುರ: ಆರ್ ಎಸ್ಎಸ್ ನ ಕಾರ್ಯಕರ್ತರಷ್ಟೇ ಅಲ್ಲದೇ ತುರ್ತು ಪರಿಸ್ಥಿತಿಯಲ್ಲಿ ಯಾರೆಲ್ಲಾ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದರೋ ಅವರೆಲ್ಲರಿಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಥಾನ ಮಾನ ನೀಡಲು ತೀರ್ಮಾನಿಸಲಾಗಿದೆ. ಆದರೆ ಆರ್ ಎಸ್ಎಸ್ ಈ ಪ್ರಸ್ತಾವನೆಯನ್ನು ವಿರೋಧಿಸಿದೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಸದಸ್ಯ ಏಕಾಂತ್ ಖಡ್ಸೆ ವಿಧಾನಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಈ ವಿಷಯಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಸ್ತಾವನೆ ನಮ್ಮ ಮುಂದಿದೆ. ಹೊಸ ವರ್ಷದಲ್ಲಿ ನಡೆಯಲಿರುವ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ತುರ್ತು ಪರಿಸ್ಥಿತಿಗೆ ವಿರುದ್ಧವಾಗಿ ಹೋರಾಡಿದವರಿಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಥಾನಮಾನ ನೀಡುವ ವಿಷಯ ಚರ್ಚೆಯಾಗಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Emergencyತುರ್ತು ಪರಿಸ್ಥಿತಿMaharashtra governmentಮಹಾರಾಷ್ಟ್ರ ಸರ್ಕಾರRSS swayamsevaksಆರ್ ಎಸ್ಎಸ್ ಸ್ವಯಂ ಸೇವಕರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


