ತಮಿಳುನಾಡು ಸರ್ಕಾರ 3 ತಿಂಗಳಲ್ಲಿ ಪತನವಾಗಲಿದೆ: ಟಿಟಿವಿ ದಿನಕರನ್
ತಮಿಳುನಾಡಿನ ಆರ್ ಕೆ ನಗರ ವಿಧಾನಸಭೆಯ ಉಪಚುನಾವಣೆಯಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಎಐಎಡಿಎಂಕೆ ಯ ಬಂಡಾಯ ನಾಯಕ ಟಿಟಿವಿ ದಿನಕರನ್, ತಮಿಳುನಾಡಿನ ಸರ್ಕಾರ ಕೆಲವೇ ತಿಂಗಳಲ್ಲಿ...

Published On :
ಚೆನ್ನೈ: ತಮಿಳುನಾಡಿನ ಆರ್ ಕೆ ನಗರ ವಿಧಾನಸಭೆಯ ಉಪಚುನಾವಣೆಯಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಎಐಎಡಿಎಂಕೆ ಯ ಬಂಡಾಯ ನಾಯಕ ಟಿಟಿವಿ ದಿನಕರನ್, ತಮಿಳುನಾಡಿನ ಸರ್ಕಾರ ಕೆಲವೇ ತಿಂಗಳಲ್ಲಿ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ದಿನಕರನ್, ಹೆಸರಿಗಷ್ಟೇ ನಾನು ಪಕ್ಷೇತರ ಅಭ್ಯರ್ಥಿ, ಆದರೆ ಎಐಎಡಿಎಂಕೆಯ ಎಲ್ಲಾ ಕಾರ್ಯಕರ್ತರು ನನ್ನೊಂದಿಗೆ ಇದ್ದಾರೆ. ನನಗೆ ಅಮ್ಮನ (ಜಯಲಲಿತ) ಆಶೀರ್ವಾದವಿದೆ ಎಂದು ಹೇಳಿದ್ದು, ಈ ಸರ್ಕಾರ 3 ತಿಂಗಳಲ್ಲಿ ಪತನವಾಗಲಿದೆ ಎಂದು ಹೇಳಿದ್ದಾರೆ.
ಆ ಕೆ ನಗರ ವಿಧಾನಸಭಾ ಕ್ಷೇತ್ರವನ್ನು ಅಮ್ಮ ಪ್ರತಿನಿಧಿಸುತ್ತಿದ್ದರು, ಈ ಕ್ಷೇತ್ರದಲ್ಲಿ ಜನತೆ ನೀಡಿರುವ ಬಹುಮತ ಪಕ್ಷ ಹಾಗೂ ಪಕ್ಷದ ಚಿಹ್ನೆ ಉಳಿಯಲಿದೆ ಎಂಬುದರ ಸಂಕೇತ, ನನಗೆ ಬೆಂಬಲ ನೀಡಿರುವ ಕ್ಷೇತ್ರದ ಜನತೆ ಹಾಗೂ ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ದಿನಕರನ್ ಹೇಳಿದ್ದಾರೆ.
ಆರ್ ಕೆ ನಗರದ ಉಪಚುನಾವಣೆ ಮತ ಎಣಿಕೆಯಲ್ಲಿ ಟಿಟಿವಿ ದಿನಕರನ್ 39000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


