ಯೋಧರ ಹತ್ಯೆಗೆ ಪ್ರತಿಕಾರ: ಪಾಕ್ ಸ್ನೈಪರ್‌ನ ಹೊಡೆದುರುಳಿಸಿದ ಭಾರತೀಯ ಯೋಧರು
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಸೇನೆಯ ಮೇಜರ್ ಸೇರಿ ನಾಲ್ವರು ಯೋಧರ ಹತ್ಯೆ ಮಾಡಿದ್ದಕ್ಕೆ ಪ್ರತಿಕಾರವಾಗಿ...

Published On :
ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಸೇನೆಯ ಮೇಜರ್ ಸೇರಿ ನಾಲ್ವರು ಯೋಧರ ಹತ್ಯೆ ಮಾಡಿದ್ದಕ್ಕೆ ಪ್ರತಿಕಾರವಾಗಿ ಭಾರತೀಯ ಯೋಧರು ಪಾಕ್ ಸ್ನೈಪರ್ ಒಬ್ಬನನ್ನು ಹೊಡೆದುರುಳಿಸಿದ್ದಾರೆ.
ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಭಾರತೀಯ ಯೋಧರ ವಿರುದ್ಧ ಗುಂಡು ಹಾರಿಸಲು ಸಿದ್ಧವಾಗುತ್ತಿದ್ದ ಪಾಕ್ ಸ್ನೈಪರ್ ನನ್ನು ಪತ್ತೆ ಹಚ್ಚಿದ ಭಾರತೀಯ ಯೋಧರು ಆತನನ್ನು ಹೊಡೆದುರುಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕೇರಿ ವಲಯದಲ್ಲಿ ಶನಿವಾರ ಕದನ ವಿರಾಮ ಉಲ್ಲಂಘಿಸಿದ್ದ ಪಾಕಿಸ್ತಾನ ಗಸ್ತು ತಿರುಗುತ್ತಿದ್ದ ಭಾರತೀಯ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಭಾರತ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದರು.
ನಿನ್ನೆ ಮತ್ತೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಪೂಂಛ್ ಜಿಲ್ಲೆಯ ಶಹಾಪುರ್ ಪ್ರದೇಶದಲ್ಲಿ ಭಾರತೀಯ ಸೇನಾ ನೆಲೆಗಳ ಮೇಲೆ ಏಕಾಏಕಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಯೋಧರೂ ಸಹ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಜಮ್ಮು ಮತ್ತು ಕಾಶ್ಮೀರJammu and KashmirCeasefireಭಾರತೀಯ ಸೇನೆಕದನ ವಿರಾಮPakistani sniperಪಾಕಿಸ್ತಾನ ಸ್ನೈಪರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


