ಮಹದಾಯಿ ವಿವಾದ: ಪ್ರಧಾನಿಗೆ ಪತ್ರ ಬರೆದ ಶಿವಸೇನೆ, ಪರಿಕ್ಕರ್ 'ಕೆಟ್ಟ ಸಂತಾ ಕ್ಲಾಸ್' ಎಂದು ಬಣ್ಣನೆ
ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಶಿವಸೇನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಕರ್ನಾಟಕಕ್ಕೆ ಮಹದಾಯಿ ನದಿ....

Published On :
ಪಣಜಿ: ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಶಿವಸೇನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಕರ್ನಾಟಕಕ್ಕೆ ಮಹದಾಯಿ ನದಿ ನೀರು ಹರಿಸಲು ಮುಂದಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರನ್ನು ತಡೆಯಬೇಕು ಎಂದು ಒತ್ತಾಯಿಸಿದೆ.
ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಮಹದಾಯಿ ವಿವಾದ ಇತ್ಯರ್ಥಪಡಿಸುವ ಸಂಬಂಧ ಕರ್ನಾಟಕದ ಜೊತೆ ಮಾತುಕತೆಗೆ ಮುಂದಾಗಿರುವ ಮನೋಹರ್ ಪರಿಕ್ಕರ್ ಅವರನ್ನು ಶಿವಸೇನೆ 'ಕೆಟ್ಟ ಸಂತಾ ಕ್ಲಾಸ್' ಎಂದು ಕರೆದಿದೆ. ಅಲ್ಲದೆ ಕರ್ನಾಟಕಕ್ಕೆ ನೀರು ಬಿಡುವುದರಿಂದ ನಮ್ಮ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಹೇಳಿದೆ.
ಗೋವಾ ಶಿವಸೇನೆ ವಕ್ತಾರ ರಾಖಿ ಪ್ರಭುದೇಸಾಯಿ ನಾಯಕ್ ಅವರು ಪ್ರಧಾನಿಗೆ ಪತ್ರ ಬರೆದಿದ್ದು, ಸಂತಾ ಕ್ಲಾಸ್ ಮಕ್ಕಳಿಗೆ ಕಾಣಿಕೆಗಳನ್ನು ನೀಡುವ ಮೂಲಕ ಅವರ ಮುಖದಲ್ಲಿ ಮಂದಹಾಸ ತರಿಸುತ್ತಾರೆ. ಆದರೆ ನಮ್ಮ ಪರಿಕ್ಕರ್ ಕೆಟ್ಟ ಸಂತಾ ಕ್ಲಾಸ್. ಕರ್ನಾಟಕಕ್ಕೆ ಕುಡಿಯಲು ನೀರು ಹರಿಸಲು ಒಪ್ಪಿಗೆ ಸೂಚಿಸುವ ಮೂಲಕ ನಮ್ಮ ಮಕ್ಕಳ ಭವಿಷ್ಯ ಕಿತ್ತುಕೊಳ್ಳಲು ಹೊರಟಿದ್ದಾರೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಪತ್ರದಲ್ಲಿ ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಪರಿಕ್ಕರ್ ನಡುವಳಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನಾಯಕ್, ಪ್ರಧಾನಿ ಮೋದಿ ಅವರು ಈ ಕೂಡಲೇ ಮಧ್ಯಪ್ರವೇಶಿಸಿ ಪರಿಕ್ಕರ್ ಅವರನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಕಳೆದ ವಾರ ಪರಿಕ್ಕರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಕುಡಿಯುವ ನೀರಿನ ಉದ್ದೇಶಕ್ಕೆ ನೀರನ್ನು ಬಳಸಿಕೊಳ್ಳುವುದಕ್ಕೆ ಗೋವಾದ ತಾತ್ವಿಕ ವಿರೋಧ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


