ಬಿಂದಿ, ತಾಳಿ ಬಿಚ್ಚಿಸಿದರು; ಜಾಧವ್ ತಾಯಿಗೆ ಮಾತೃ ಭಾಷೆಯಲ್ಲಿ ಮಾತನಾಡಲು ಅನುಮತಿ ನಿರಾಕರಿಸಿದರು!
ಕುಲಭೂಷಣ್ ಜಾಧವ್ ಗೆ ತಾಯಿಯೊಂದಿಗೆ ಮಾತೃ ಭಾಷೆಯಲ್ಲಿ ಮಾತನಾಡಲು ಪಾಕ್ ಅಧಿಕಾರಿಗಳು ಅನುಮತಿ ನಿರಾಕರಣೆ ಮಾಡಿದ್ದರು ಎಂದು ತಿಳಿಸಿದೆ.

Published On :
ನವದೆಹಲಿ: ಪಾಕಿಸ್ತಾನದಲ್ಲಿ ಬಂಧನಕ್ಕೊಳಗಾಗಿರುವ ಭಾರತೀಯ ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಕುಟುಂಬ ಸದಸ್ಯರು ಭೇಟಿ ಮಾಡಿರುವುದರ ಬಗ್ಗೆ ವಿದೇಶಾಂಗ ಸಚಿವಾಲಯ ಕೆಲವು ಮಾಹಿತಿಗಳನ್ನು ಬಹಿರಂಗಪಡಿಸಿದ್ದು, ಕುಲಭೂಷಣ್ ಜಾಧವ್ ಗೆ ತಾಯಿಯೊಂದಿಗೆ ಮಾತೃ ಭಾಷೆಯಲ್ಲಿ ಮಾತನಾಡಲು ಪಾಕ್ ಅಧಿಕಾರಿಗಳು ಅನುಮತಿ ನಿರಾಕರಣೆ ಮಾಡಿದ್ದರು ಎಂದು ತಿಳಿಸಿದೆ.
ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಪಾಕಿಸ್ತಾನದ ಅಧಿಕಾರಿಗಳು ಭೇಟಿಯ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಜಾಧವ್ ಅವರಿದ್ದ ರೀತಿ ಅವರ ಆರೋಗ್ಯ ಸುಸ್ಥಿತಿಯಲ್ಲಿರುವುದರ ಬಗ್ಗೆ ಅನುಮಾನ ಮೂಡಿಸುತ್ತವೆ. ಕುಟುಂಬ ಸದಸ್ಯರೊಂದಿಗಿನ ಮಾತುಕತೆ ವೇಳೆಯಲ್ಲಿಯೂ ಅವರ ಮಾತುಗಳು ತರಬೇತುಗೊಳಿಸಿದಂತೆಯೇ ಇತ್ತು. ಹೆದರಿಕೆ ಮತ್ತು ಒತ್ತಡದಲ್ಲಿಯೇ ಜಾಧವ್ ಮಾತನಾಡಿದ್ದು ಸ್ಪಷ್ಟವಾಗಿತ್ತು ಎಂದು ಹೇಳಿದ್ದಾರೆ.
ಭೇಟಿಗೂ ಮುನ್ನ ಜಾಧವ್ ಪತ್ನಿ ಅವರ ಬಿಂದಿ, ಮಂಗಳಸೂತ್ರ, ಚಪ್ಪಲಿಗಳನ್ನು ತೆಗೆಸಿದ್ದರು. ವಾಪಸ್ ಹೊರಡುವ ವೇಳೆ ಜಾಧವ್ ಪತ್ನಿ ಪಾದರಕ್ಷೆಗಳನ್ನು ವಾಪಸ್ ನೀಡುವಂತೆ ಕೇಳಿದರೂ ಕೊಡಲಿಲ್ಲ. ಅಷ್ಟೇ ಅಲ್ಲ, ಜಾಧವ್ ಅವರು ತಮ್ಮ ತಾಯಿಯೊಂದಿಗೆ ಮಾತೃ ಭಾಷೆಯಾದ ಮರಾಠಿಯಲ್ಲಿ ಮಾತನಾಡುವುದಕ್ಕೂ ಅವಕಾಶ ನೀಡಲಿಲ್ಲ ಎಂದು ವಿದೇಶಾಂಗ ಇಲಾಖೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


