ಮಹದಾಯಿ ಪ್ರತಿಭಟನೆ: ರಾಜ್ಯಪಾಲರ ಭೇಟಿಗೆ ಅವಕಾಶ ಸಿಗದೇ ಕಾರ್ಯದರ್ಶಿಗೆ ಮನವಿ ಪತ್ರ ನೀಡಿದ ರೈತರು!
ಮಹದಾಯಿ ನದಿ ನೀರು ಹಂಚಿಕೆ ಸಂಬಂಧಿಸಿ ಪ್ರತಿಭಟನಾ ನಿರತ ರೈತರು ಡಿ.27 ರಂದು ರಾಜಭವಕ್ಕೆ ತೆರಳಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

Published On :
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಸಂಬಂಧಿಸಿ ಪ್ರತಿಭಟನಾ ನಿರತ ರೈತರು ಡಿ.27 ರಂದು ರಾಜಭವಕ್ಕೆ ತೆರಳಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ರೈತರು, ರಾಜ್ಯಪಾಲರು ರಾಜಭವನದಲ್ಲಿಯೇ ಇದ್ದರೂ ಸಹ ಅಪಾಯಿಂಟ್ ಮೆಂಟ್ ಪಡೆದಿಲ್ಲವೆಂಬ ಕಾರಣಕ್ಕೆ ನಮಗೆ ರಾಜ್ಯಪಾಲರನ್ನು ಭೇಟಿ ಮಾಡಲು ಅವಕಾಶ ನೀಡಿಲ್ಲ, ಬದಲಾಗಿ ನಮ್ಮ ಮನವಿ ಪತ್ರವನ್ನು ರಾಜ್ಯಪಾಲರ ಮುಖ್ಯ ಕಾರ್ಯದರ್ಶಿ ಮನವಿ ಪತ್ರವನ್ನು ಸ್ವೀಕರಿಸಿದ್ದಾರೆ. ರಾಜ್ಯಪಾಲರ ಭೇಟಿಗೆ ಅವಕಾಶ ನೀಡದೇ ಇರುವುದಕ್ಕೆ ನಮ್ಮ ಮನಸ್ಸಿಗೆ ನೋವಾಗಿದೆ ಎಂದು ಪ್ರತಿಭಟನಾ ನಿರತ ರೈತ ವಿರೇಶ್ ಸೋಬರದ ಮಠ ಹೇಳಿದ್ದಾರೆ.
ರಾಜ್ಯಪಾಲರ ಭೇಟಿಗೆ ಅವಕಾಶ ಅವಕಾಶ ನೀಡದೇ ಇದ್ದುದ್ದನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ, ರಾಜ್ಯಪಾಲರು ನಮ್ಮ ಮನವಿಯನ್ನು ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ರೈತರು ಹೇಳಿದ್ದಾರೆ.
ರಾಜಭವನದಿಂದ ನಿರ್ಗಮಿಸಿರುವ ರೈತರು ಚುನಾವಣಾ ಆಯೋಗಕ್ಕೆ ತೆರಳಿ ಮನವಿ ಸಲ್ಲಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


