ದೇಶ

ಕುಲಭೂಷಣ್ ಕುರಿತು ಕೀಳು ಮಟ್ಟದ ಹೇಳಿಕೆ ನೀಡಿದ ಸಮಾಜವಾದಿ ಪಕ್ಷದ ಸಂಸದ

ಗೂಢಚಾರಿಕೆ ಆರೋಪದಡಿ ಪಾಕಿಸ್ತಾನದಲ್ಲಿ ಬಂಧನಕ್ಕೊಳಗಾಗಿರುವ ಕುಲಭೂಷಣ್ ಜಾಧವ್ ಭೇಟಿ ಸಂಬಂಧ ಆತನ ತಾಯಿ ಹಾಗೂ ಪತ್ನಿಯನ್ನು ಪಾಕಿಸ್ತಾನ...

ಕುಲಭೂಷಣ್ ಕುರಿತು ಕೀಳು ಮಟ್ಟದ ಹೇಳಿಕೆ ನೀಡಿದ ಸಮಾಜವಾದಿ ಪಕ್ಷದ ಸಂಸದ
ನರೇಶ್ ಅಗರ್ವಾಲ್
Published On :
ನವದೆಹಲಿ: ಗೂಢಚಾರಿಕೆ ಆರೋಪದಡಿ ಪಾಕಿಸ್ತಾನದಲ್ಲಿ ಬಂಧನಕ್ಕೊಳಗಾಗಿರುವ ಕುಲಭೂಷಣ್ ಜಾಧವ್ ಭೇಟಿ ಸಂಬಂಧ ಆತನ ತಾಯಿ ಹಾಗೂ ಪತ್ನಿಯನ್ನು ಪಾಕಿಸ್ತಾನ ನಡೆಸಿಕೊಂಡ ರೀತಿಯ ಕುರಿತು ದೇಶಾದ್ಯಂತ ಅಸಮಾಧಾನ ವ್ಯಕ್ತವಾಗುತ್ತಿದ್ದು ಈ ಮಧ್ಯೆ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್ವಾಲ್ ಅಕ್ಷಮ್ಯ ಹೇಳಿಕೆ ನೀಡಿ ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 
ಪಾಕಿಸ್ತಾನ ಕುಲಭೂಷಣ್ ಜಾದವ್ ರನ್ನು ಭಯೋತ್ಪಾದಕ ಎಂದು ಪರಿಗಣಿಸಿದ್ದು ಅದರಂತೆ ನಡೆಸಿಕೊಳ್ಳುತ್ತಿದೆ. ಭಯೋತ್ಪಾದಕರು ಎನಿಸಿಕೊಂಡವರನ್ನು ಭಾರತ ಕೂಡಾ ಇದೇ ರೀತಿಯಲ್ಲಿ ನಡೆಸಿಕೊಳ್ಳಬೇಕು ಎಂದು ನರೇಶ್ ಅಗರ್ವಾಲ್ ಹೇಳಿದ್ದಾರೆ. 
ಇನ್ನು ಇದೇ ವೇಳೆ ಪಾಕಿಸ್ತಾನಿ ಜೈಲುಗಳಲ್ಲಿ ಸಾಕಷ್ಟು ಮಂದಿ ಭಾರತೀಯರು ಶಿಕ್ಷೆಗೆ ಗುರಿಯಾಗಿದ್ದಾರೆ. ಇಂತರ ಸಂದರ್ಭದಲ್ಲಿ ಕೇವಲ ಜಾದವ್ ವಿಚಾರ ಮಾತ್ರವೇ ಮಾಧ್ಯಮಗಳಲ್ಲಿ ಯಾಕೆ ಸುದ್ದಿಯಾಗುತ್ತಿದೆ ಎಂದು ಅಗರ್ವಾಲ್ ಪ್ರಶ್ನಿಸಿದರು. 
ನರೇಶ್ ಅಗರ್ವಾಲ್ ಹೇಳಿಕೆಯಿಂದ ಸಮಾಜವಾದಿ ಪಕ್ಷ(ಎಸ್ಪಿ)ಗೆ ಸಾಕಷ್ಟು ಮುಖಭಂಗವಾಗಿದ್ದು ಈ ನಿಟ್ಟಿನಲ್ಲಿ ಪಕ್ಷದಿಂದ ಯಾವುದೇ ಸ್ಪಷ್ಟನೆ ಹೊರಬಂದಿಲ್ಲ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.