ಮಹದಾಯಿ ಪ್ರದೇಶದ ಕುಡಿಯುವ ನೀರಿಗೆ ನಮ್ಮ ವಿರೋಧವಿಲ್ಲ: ಗೋವಾ ಪರ ವಕೀಲ
ಒಂದು ಕಡೆ ಮಹದಾಯಿ ನದಿಯ ಹನಿ ನೀರನ್ನು ಕರ್ನಾಟಕಕ್ಕೆ ಬಿಡುವುದಿಲ್ಲ ಎಂದು ಗೋವಾ ಜಲ ಸಂಪನ್ಮೂಲ ಸಚಿವರು ಹೇಳುತ್ತಿದ್ದರ....

Published On :
ಪಣಜಿ: ಒಂದು ಕಡೆ ಮಹದಾಯಿ ನದಿಯ ಹನಿ ನೀರನ್ನು ಕರ್ನಾಟಕಕ್ಕೆ ಬಿಡುವುದಿಲ್ಲ ಎಂದು ಗೋವಾ ಜಲ ಸಂಪನ್ಮೂಲ ಸಚಿವರು ಹೇಳುತ್ತಿದ್ದರ ಮತ್ತೊಂದು ಕಡೆ ಕುಡಿಯುವ ನೀರು ಬಿಡಲು ನಮ್ಮ ವಿರೋಧವಿಲ್ಲ ಎಂದು ಗೋವಾ ಪರ ವಕೀಲರು ಹೇಳಿದ್ದಾರೆ.
ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಮನೋಹಪರ್ ಪರಿಕ್ಕರ್ ಅವರು ಕರ್ನಾಟಕಕ್ಕೆ ಕುಡಿಯುವ ನೀರು ಬಿಡಲು ನಮ್ಮ ತಾತ್ಪಿಕ ಒಪ್ಪಿಗೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಇದರ ಬೆನ್ನಲ್ಲೇ ಕುಡಿಯುವ ನೀರಿನ ಬೇಡಿಕೆಗೆ ಯಾವ ರಾಜ್ಯ ಕೂಡಾ ವಿರೋಧ ವ್ಯಕ್ತಪಡಿಸಲು ಸಾಧ್ಯವೇ ಇಲ್ಲ. ಆದರೆ, ಕರ್ನಾಟಕದ ಬೇಡಿಕೆಯಲ್ಲೇ ಲೋಪವಿದೆ ಎಂದು ಗೋವಾ ಪರ ವಕೀಲ ಆತ್ಮಾರಾಮ ನಾಡಕರ್ಣಿ ಅವರು ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ನಾಡಕರ್ಣಿ, ಕುಡಿಯುವ ಉದ್ದೇಶಕ್ಕಾಗಿ ಕರ್ನಾಟಕಕ್ಕೆ 0.1ಟಿಎಂ ನೀರು ಗೋವಾದ ವಿರೋಧವಿಲ್ಲ ಮತ್ತು ಇದನ್ನು ನ್ಯಾಯಾಧೀಕರಣಕ್ಕೂ ಸ್ಪಷ್ಟಪಡಿಸಲಾಗಿದೆ ಎಂದು ಮಹದಾಯಿ ನ್ಯಾಯಾಧೀಕರಣದಲ್ಲಿ ಗೋವಾ ಪರ ವಾದ ಮಂಡಿಸುತ್ತಿರುವ ನಾಡಕರ್ಣಿ ಅವರು ತಿಳಿಸಿದ್ದಾರೆ.
ಇದೇ ವೇಳೆ ಮನೋಹರ್ ಪರಿಕ್ಕಾರ್ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ ನಾಡಕರ್ಣಿ ಅವರು, ಗೋವಾ ಸಿಎಂ, ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ. ರಾಜಕೀಯ ಲಾಭ ನಷ್ಟದ ಬಗ್ಗೆ ನಾನು ಪ್ರತಿಕ್ರಿಯಿಸಲಾರೆ ಎಂದು ಆತ್ಮಾರಾಮ್ ಹೇಳಿದ್ದಾರೆ.
ಕರ್ನಾಟಕ 7.56 ಟಿಎಂಸಿ ನೀರು ಕೇಳುತ್ತಿದೆ. ಆದರೆ, ಜಲಾನಯನ ಪ್ರದೇಶದ ಬಳಕೆಯನ್ನು ಮಾತ್ರ ಪರಿಗಣಿಸಿದರೆ ಬೆಳಗಾವಿ, ಖಾನಾಪುರ, ಪ್ರದೇಶಕ್ಕೆ ಎಷ್ಟು ಕುಡಿಯುವ ನೀರು ಬೇಕೋ ಅದನ್ನು ಅವರು ತೆಗೆದುಕೊಳ್ಳಲು ಯಾವುದೇ ವಿರೋಧವಿಲ್ಲ. ಈ ಬಗ್ಗೆ ನ್ಯಾಯಾಧೀಕರಣದ ಮುಂದೆ ಕೂಡಾ ಸ್ಪಷ್ಟಪಡಿಸಲಾಗಿದೆ. ಅದರಂತೆ, ಮಹದಾಯಿ ನದಿ ತೀರದ ಬೆಳಗಾವಿ ಖಾನಾಪುರ ಜನರಿಗೆ 0.1 ಟಿಎಂಸಿ ನೀರು ಬಿಡಲು ಸಿದ್ಧ ಎಂದರು.
ಒಂದು ಹನಿ ನೀರನ್ನೂ ಕೊಡುವುದಿಲ್ಲ ಎಂದು ಹೋರಾಟಗಾರರು, ರಾಜಕೀಯ ಮುಖಂಡರಂತೆ ನ್ಯಾಯಾಧೀಕರಣದ ಮುಂದೆ ವಾದಿಸಲು ಸಾಧ್ಯವಿಲ್ಲ. ಹುಬ್ಬಳ್ಳಿ-ಧಾರವಾಡ ಭಾಗದ ಕುಡಿಯುವ ನೀರಿನ ಅಗತ್ಯಕ್ಕಾಗಿ ಬೇಡಿಕೆ ಇದೆ. ಆದರೆ, ಜಲಾನಯನ ಪ್ರದೇಶವಲ್ಲದ ಭಾಗಗಳಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದರು.
ನ್ಯಾಯಾಧಿಕರಣದಲ್ಲಿ ಕೇಸ್ ಗೋವಾ ಪರವೇ ಗಟ್ಟಿ ಇದೆ. ಗೋವಾ ವಕೀಲರ ತಂಡ ರಾಜ್ಯದ ಹಿತಾಸಕ್ತಿಗಾಗಿ ಹೋರಾಟ ಮಾಡ್ತಿದೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ನಮಗೆ ಮಹದಾಯಿ ನದಿ ಗೋವಾದಲ್ಲಿ ಹರಿಯಬೇಕು ಎಂದು ಹೇಳಿದ್ದಾರೆ.
ಮಹದಾಯಿ ವಿಚಾರಣೆ ಕೊನೆಯ ಹಂತಕ್ಕೆ ಬಂದಿದೆ. ಎಲ್ಲಾ ಸಾಕ್ಷಿ, ಪುರಾವೆಗಳ ಪರಿಶೀಲನೆ ಮುಗಿದಿದೆ. ಒಂದೆರಡು ಸಾಕ್ಷ್ಯಾಧಾರಗಳ ಪರಿಶೀಲನೆಗೆ ಕರ್ನಾಟಕಕ್ಕೆ ಸ್ವಾತಂತ್ರ್ಯ ನೀಡಲಾಗಿದೆ. ಜೂನ್-ಜುಲೈ ವೇಳೆಗೆ ನ್ಯಾಯಾಧಿಕರಣದಿಂದ ತೀರ್ಪು ಬರುತ್ತದೆ. ಆಗಸ್ಟ್ 2018ರ ವೇಳೆಗೆ ನ್ಯಾಯಾಧಿಕರಣದ ಅವಧಿ ಕೂಡ ಮುಕ್ತಾಯವಾಗುತ್ತದೆ. ಅದಕ್ಕೂ ಮುನ್ನ ಅವರು ತೀರ್ಪು ಪ್ರಕಟಿಸಬೇಕು ಎಂದು ನಾಡಕರ್ಣಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


