ಸ್ವದೇಶೀ ನಿರ್ಮಿತ ಸೂಪರ್ಸಾನಿಕ್ ಇಂಟರ್ಸೆಪ್ಟರ್ ಕ್ಷಿಪಣಿ ಪರೀಕ್ಷೆ ಯಶಸ್ವಿ
ಸ್ವದೇಶೀ ನಿರ್ಮಿತ ಖಂಡಾಂತರ ಕ್ಷಿಪಣಿಯನ್ನು ಕೆಳ ಹಂತದಲ್ಲಿ ಹೊಡೆದುರುಳಿಸಬಲ್ಲ ಸೂಪರ್ಸಾನಿಕ್ ಇಂಟರ್ಸೆಪ್ಟರ್ ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿದೆ.

Published On :
ಭುವನೇಶ್ವರ್: ಸ್ವದೇಶೀ ನಿರ್ಮಿತ ಖಂಡಾಂತರ ಕ್ಷಿಪಣಿಯನ್ನು ಕೆಳ ಹಂತದಲ್ಲಿ ಹೊಡೆದುರುಳಿಸಬಲ್ಲ ಸೂಪರ್ಸಾನಿಕ್ ಇಂಟರ್ಸೆಪ್ಟರ್ ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿದೆ.
ಒಡಿಶಾದಲ್ಲಿರುವ ಅಬ್ದುಲ್ ಕಲಾಂ ದ್ವೀಪದಲ್ಲಿ ಇಂದು ಕ್ಷಿಪಣಿ ಪರೀಕ್ಷೆ ನಡೆಸಲಾಗಿದ್ದು ಇದು ಅಡ್ವಾನ್ಸ್ ಏರ್ ಡಿಫೆನ್ಸ್ನ ಭಾಗವಾಗಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ
. ಈ ಹಿಂದೆಯೂ ಸಹ ಇದೇ ವರ್ಷ ಫೆಬ್ರವರಿ 11 ಮತ್ತು ಮಾರ್ಚ್ 1 ರಂದು ಕ್ಷಿಪಣಿ ಪರೀಕ್ಷೆ ನಡೆಸಲಾಗಿತ್ತು. ಆ ಎರಡು ಪರೀಕ್ಷೆಗಳೂ ಯಶಸ್ವಿಯಾಗಿದ್ದವು. ಇಂದಿನ ಕ್ಷಿಪಣಿ ಪರೀಕ್ಷೆಯಲ್ಲಿ ಹಲವು ಮಾನದಂಡಗಳ ಅಡಿಯಲ್ಲಿ ಪರಿಶೀಲನೆ ನಡೆದಿದ್ದು ಇದು ಸಹ ಅತ್ಯಂತ ಯಶಸ್ವಿಯಾಗಿದೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.
ಕ್ಷಿಪಣಿಯಲ್ಲಿ ನ್ಯಾವಿಗೇಷನ್ ವ್ಯವಸ್ಥೆ, ಅತ್ಯಾಧುನಿಕ ಕಂಪ್ಯೂಟರ್, ಎಲೆಕ್ಟ್ರೋ ಮೆಕಾನಿಕಲ್ ಆಕ್ಟಿವೇಟರ್ಗಳನ್ನು ಜೋಡಣೆ ಮಾಡಲಾಗಿದ್ದು ಕ್ಷಿಪಣಿಯು ಒಟ್ಟು 7.5 ಮೀಟರ್ ಉದ್ದವಿದೆ. ವೈರಿ ರಾಷ್ಟ್ರಗಳ ದಾಳಿಯನ್ನು ಸಮರ್ಥವಾಗಿ ತಡೆಯುವ ಸಾಮರ್ಥ್ಯ ಈ ಕ್ಷಿಪಣಿ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Abdul Kalam islandಬ್ಯಾಲಿಸ್ಟಿಕ್ ಕ್ಷಿಪಣಿBallistic Missile Defence (BMD)AAD interceptor missileಅಬ್ದುಲ್ ಕಲಾಮ್ ದ್ವೀಪಎ ಎ ಡಿ ಇಂಟರ್ಸೆಪ್ಟರ್ ಕ್ಷಿಪಣಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


