ದೇಶ

ಸಂವಿಧಾನ ಬದಲು ಹೇಳಿಕೆ: ಲೋಕಸಭೆಯಲ್ಲಿ ಸಚಿವ ಅನಂತ್ ಕುಮಾರ್ ಹೆಗಡೆ ಕ್ಷಮೆಯಾಚನೆ

ನಾವು ಸಂವಿಧಾನವನ್ನು ಬದಲಿಸುತ್ತೇವೆ ಎಂದು ಹೇಳಿ ಸಂಸತ್ತಿನ ಒಳಗೆ ...

ಸಂವಿಧಾನ ಬದಲು ಹೇಳಿಕೆ: ಲೋಕಸಭೆಯಲ್ಲಿ ಸಚಿವ ಅನಂತ್ ಕುಮಾರ್ ಹೆಗಡೆ ಕ್ಷಮೆಯಾಚನೆ
ಲೋಕಸಭೆಯಲ್ಲಿಂದು ಕ್ಷಮೆಯಾಚಿಸಿದ ಸಚಿವ ಅನಂತ್ ಕುಮಾರ್ ಹೆಗಡೆ(ಫೋಟೋ ಕೃಪೆ-ಎಎನ್ ಐ)
Published On :
ನವದೆಹಲಿ: ನಾವು ಸಂವಿಧಾನವನ್ನು ಬದಲಿಸುತ್ತೇವೆ ಎಂದು ಹೇಳಿ ಸಂಸತ್ತಿನ ಒಳಗೆ ಮತ್ತು ಹೊರಗೆ ತೀವ್ರ ಟೀಕೆ, ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಗುರುವಾರ ಲೋಕಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ. ಈ ಮೂಲಕ ವಿವಾದ ತಣ್ಣಗಾಗಲು ಸಚಿವ ಹೆಗಡೆ ಯತ್ನಿಸಿದ್ದಾರೆ.
ಇಂದು ಬೆಳಗ್ಗೆ ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷದ ಸದಸ್ಯರು ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ಗದ್ದಲ, ವಿರೋಧ ಎಬ್ಬಿಸಲು ಆರಂಭಿಸಿದರು. ಆಗ ಎದ್ದು ನಿಂತು ಹೇಳಿಕೆ ನೀಡಿದ ಸಚಿವ ಅನಂತ್ ಕುಮಾರ್, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದರು.
ನಾನು ಸಂವಿಧಾನವನ್ನು ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅಪಾರವಾಗಿ ಗೌರವಿಸುತ್ತೇನೆ. ನನಗೆ ಸಂವಿಧಾನವೇ ಶ್ರೇಷ್ಠ. ಅದರಲ್ಲಿ ಯಾವುದೇ ಪ್ರಶ್ನೆ ಮತ್ತು ಸಂದೇಹವಿಲ್ಲ. ಈ ದೇಶದ ನಾಗರಿಕನಾಗಿ ನಾನು ಸಂವಿಧಾನದ ವಿರುದ್ಧ ಹೋಗಲು ಸಾಧ್ಯವಿಲ್ಲ ಎಂದು ಅನಂತ್ ಕುಮಾರ್ ಹೇಳಿದರು.
ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸಚಿವ ಹೆಗಡೆಯವರ ಹೇಳಿಕೆ ಬಗ್ಗೆ ಹೆಚ್ಚಿನ ಸ್ಪಷ್ಟತೆ ಕೇಳಿದಾಗ, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ನನ್ನ ಹೇಳಿಕೆಯಿಂದಾಗಿ ಕಲಾಪಗಳಿಗೆ ಅಡ್ಡಿಯುಂಟಾಗುತ್ತಿದೆ. ಸಂವಿಧಾನವನ್ನು ಅಗೌರವಿಸುವ ಉದ್ದೇಶ ನನಗೆ ಇಲ್ಲ, ಸಂವಿಧಾನ ಮತ್ತು ಸಂಸತ್ತು ನನಗೆ ಶ್ರೇಷ್ಠವಾಗಿದೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ಮತ್ತೊಮ್ಮೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.