ದೇಶ

ಮುಂಬೈ ಅಗ್ನಿ ಅವಘಡ: ನಿರ್ಲಕ್ಷ ವಹಿಸಿದ ಐವರು ಬಿಎಂಸಿ ಅಧಿಕಾರಿಗಳ ಅಮಾನತು

ಮುಂಬೈನ ಲೋವರ್ ಪರೆಲ್ ಪ್ರದೇಶದ ಕಮಲಾ ಮಿಲ್ಸ್ ಕಂಪೌಂಡ್ ನಲ್ಲಿರುವ ರೆಸ್ಟೊರೆಂಟ್ ನಲ್ಲಿ ಭೀಕರ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ...

ಮುಂಬೈ ಅಗ್ನಿ ಅವಘಡ: ನಿರ್ಲಕ್ಷ ವಹಿಸಿದ ಐವರು ಬಿಎಂಸಿ ಅಧಿಕಾರಿಗಳ ಅಮಾನತು
ಕಮಲ ಮಿಲ್ಸ್ ಅಗ್ನಿ ಅವಘಡ
Published On :
ಮುಂಬೈ: ಮುಂಬೈನ ಲೋವರ್ ಪರೆಲ್ ಪ್ರದೇಶದ ಕಮಲಾ ಮಿಲ್ಸ್ ಕಂಪೌಂಡ್ ನಲ್ಲಿರುವ ರೆಸ್ಟೊರೆಂಟ್ ನಲ್ಲಿ ಭೀಕರ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಬೃಹನ್ ಮುಂಬೈ ಮಹಾನಗರ ಪಾಲಿಕೆಯ ಐವರು ಅಧಿಕಾರಿಗಳು ಶುಕ್ರವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ನಿರ್ಲಕ್ಷ ವಹಿಸಿದ ಆರೋಪದ ಮೇಲೆ ನಿಯೋಜಿತ ಅಧಿಕಾರಿ, ಜೂನಿಯರ್ ಇಂಜಿನಿಯರ್, ಉಪ ಎಂಜಿನಿಯರ್, ವೈದ್ಯಕೀಯ ಅಧಿಕಾರಿ ಮತ್ತು ಸಹಾಯಕ ಅಗ್ನಿಶಾಮಕ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ರೆಸ್ಟೊರೆಂಟ್ ನಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕಿಂಗ್​ ಎಡ್ವರ್ಡ್​ ಮೆಮೋರಿಯಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 304ರಡಿಯಲ್ಲಿ ನರಹತ್ಯೆ ಆರೋಪದ ಮೇಲೆ ರೆಸ್ಟೊರೆಂಟ್ ಮಾಲಿಕರ ವಿರುದ್ಧ ಕೇಸು ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.