ಮೇಘಾಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಮಾಜಿ ಸಿಎಂ ಲಪಾಂಗ್ ವಜಾ
ಮಾಜಿ ಮುಖ್ಯಮಂತ್ರಿ ಡಿಡಿ ಲಪಾಂಗ್ ರನ್ನು ಮೇಘಾಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಜಾ ಮಾಡಿ ಅವರ ಸ್ಥಾನಕ್ಕೆ ಸೆಲೆಸ್ಟಿನ್...

Published On :
ನವದೆಹಲಿ: ಮಾಜಿ ಮುಖ್ಯಮಂತ್ರಿ ಡಿಡಿ ಲಪಾಂಗ್ ರನ್ನು ಮೇಘಾಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಜಾ ಮಾಡಿ ಅವರ ಸ್ಥಾನಕ್ಕೆ ಸೆಲೆಸ್ಟಿನ್ ಲಿಂಗ್ಡೊ ಅವರನ್ನು ನೇಮಕ ಮಾಡಿದ್ದಾರೆ.
ನಿನ್ನೆಯಷ್ಟೇ ಐವರು ಕಾಂಗ್ರೆಸ್ ಶಾಸಕರು ಪಕ್ಷ ತೊರೆದಿದ್ದು ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಹಲವು ಮಹತ್ವದ ಬದಲಾವಣೆಗಳನ್ನು ಮಾಡಿದ್ದಾರೆ.
ಸದ್ಯ ಸೆಲೆಸ್ಟಿನ್ ಲಿಂಗ್ಡೊ ಅವರು ಮೇಘಾಲಯದ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಅವರ ಸಚಿವ ಸಂಪುಟದ ಸಚಿವರಾಗಿದ್ದಾರೆ. ಇದೇ ವೇಳೆ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗಾಗಿ 13 ಸದಸ್ಯರ ಚುನಾವಣಾ ಸಮಿತಿಯ ಅಧ್ಯಕ್ಷರಾಗಿ ಸೆಲೆಸ್ಟೈನ್ ಲಿಂಗ್ಡೊ ಅವರನ್ನು ರಾಹುಲ್ ಗಾಂಧಿಯವರು ನೇಮಕ ಮಾಡಿದ್ದಾರೆ. ಇನ್ನು ಶಿಲ್ಲಾಂಗ್ ಸಂಸದ ವಿನ್ಸೆಂಟ್ ಹೆಚ್ ಪಾಲಾ ಅವರನ್ನು ಪಿಸಿಸಿ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಮೇಘಾಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿರುವ ಡಿಡಿ ಲಪಾಂಗ್ ರನ್ನು ರಾಹುಲ್ ಗಾಂಧಿ ಪ್ರದೇಶ ಕಾಂಗ್ರೆಸ್ ಸಮಿತಿಯ ಸಲಹೆಗಾರರಾಗಿ ನೇಮಕ ಮಾಡಿದ್ದಾರೆ.
ಮೇಘಾಲಯದ ಎಂಟು ಶಾಸಕರ ಪೈಕಿ ಐವರು ಕಾಂಗ್ರೆಸ್ ಶಾಸಕರು ಪಕ್ಷಕ್ಕೆ ರಾಜಿನಾಮೆ ನೀಡಿ ಎನ್ಡಿಎ ಮಿತ್ರಪಕ್ಷವಾಗಿರುವ ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್ಪಿಪಿ) ಸೇರಿದ್ದು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎನ್ಪಿಪಿ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


