ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ: ಯಾವ ಸ್ಟಾರ್ ಏನು ಹೇಳಿದರು?
ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶ ಭಾರತದಲ್ಲಿ ಸಂಚಲನ ಉಂಟುಮಾಡಿದ್ದು, ರಜನಿ ರಾಜಕೀಯ ಪ್ರವೇಶ ಸಂಬಂಧ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

Published On :
ನವದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶ ಭಾರತದಲ್ಲಿ ಸಂಚಲನ ಉಂಟುಮಾಡಿದ್ದು, ರಜನಿ ರಾಜಕೀಯ ಪ್ರವೇಶ ಸಂಬಂಧ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.
ಖ್ಯಾತ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಅಮಿತಾಬ್ ಬಚ್ಚನ್, ನಟಿ ಹಾಗೂ ತಮಿಳುನಾಡು ಕಾಂಗ್ರೆಸ್ ನ ವಕ್ತಾರೆ ಖುಷ್ಬೂ, ನಟ ಅನುಪಮ್ ಖೇರ್ ಸೇರಿದಂತೆ ಹಲವು ಖ್ಯಾತ ನಾಮರು ರಜನಿ ರಾಜಕೀಯ ಪ್ರವೇಶ ಸಂಬಂಧ ಶುಭ ಹರಸಿದ್ದಾರೆ. ಟ್ವಿಟರ್ ನಲ್ಲಿ ನಟ ಅಮಿತಾಬ್ ಬಚ್ಚನ್ ನನ್ನ ಸ್ನೇಹಿತ ರಜನಿಕಾಂತ್ ರಾಜಕೀಯ ಪ್ರವೇಶ ಮಾಡಿದ್ದು. ಸಾಮಾಜಿಕ ಪ್ರಜ್ಞೆ ಇರುವ ರಜನಿ ರಾಜಕೀಯ ಭವಿಷ್ಯಕ್ಕೆ ಶುಭ ಕೋರುತ್ತೇನೆ ಎಂದು ಹೇಳಿದ್ದಾರೆ.
ಇನ್ನು ನಟ ಅನುಪಮ್ ಖೇರ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಅಂತಿಮವಾಗಿ ರಜನಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಜೈಹೋ ಎಂದು ಹೇಳಿದ್ದಾರೆ.
ಉಳಿದಂತೆ ವಿವಿಧ ಖ್ಯಾತನಾಮರು ಟ್ವಿಟರ್ ನಲ್ಲಿ ರಜನಿ ಶುಭ ಹರಿಸಿದ್ದು, ಈ ಟ್ವೀಟ್ ಗಳ ಪಟ್ಟಿ ಇಲ್ಲಿದೆ.
T 2758 - My dear friend , my colleague and a humble considerate human, RAJNIKANTH, announces his decision to enter politics .. my best wishes to him for his success !!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiTwitterಟ್ವಿಟರ್Bollywoodಬಾಲಿವುಡ್TamilNadu Politicsತಮಿಳುನಾಡು ರಾಜಕೀಯRajini PoliticsRajinikanth Political Entryರಜನಿ ರಾಜಕೀಯರಜನಿಕಾಂತ್ ರಾಜಕೀಯ ಪ್ರವೇಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


