ದೇಶ

25 ವರ್ಷಗಳ ಕನಸು ನನಸು: ಮುಗಿಲು ಮುಟ್ಟಿದ ರಜನಿ ಅಭಿಮಾನಿಗಳ ಸಂಭ್ರಮಾಚರಣೆ

ರಜನಿ ಅಭಿಮಾನಿಗಳ 25 ವರ್ಷಗಳ ಕನಸು ನನಸಾಗಿದ್ದು, ಸೂಪರ್ ಸ್ಚಾರ್ ರಾಜಕೀಯ ಪ್ರವೇಶ ಘೋಷಣೆಯಾಗುತ್ತಿದ್ದಂತೆಯೇ ಇತ್ತ ಅವರ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

25 ವರ್ಷಗಳ ಕನಸು ನನಸು: ಮುಗಿಲು ಮುಟ್ಟಿದ ರಜನಿ ಅಭಿಮಾನಿಗಳ ಸಂಭ್ರಮಾಚರಣೆ
ಚೆನ್ನೈನಲ್ಲಿ ರಜನಿ ಅಭಿಮಾನಿಗಳ ಸಂಭ್ರಮಾಚರಣೆ
Published On :
ಚೆನ್ನೈ: ರಜನಿ ಅಭಿಮಾನಿಗಳ 25 ವರ್ಷಗಳ ಕನಸು ನನಸಾಗಿದ್ದು, ಸೂಪರ್ ಸ್ಚಾರ್ ರಾಜಕೀಯ ಪ್ರವೇಶ ಘೋಷಣೆಯಾಗುತ್ತಿದ್ದಂತೆಯೇ ಇತ್ತ ಅವರ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ಚೆನ್ನೈನ ರಾಘವೇಂದ್ರ ಕಲ್ಯಾಣ ಮಂಟಪಂ ನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ರಾಜಕೀಯ ಪ್ರವೇಶದ ಕುರಿತು ಘೋಷಣೆ ಮಾಡುತ್ತಿದ್ದಂತೆಯೇ ಇತ್ತ ಅವರ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದ್ದು, ಚೆನ್ನೈನಲ್ಲಿರುವ ರಜನಿ ನಿವಾಸದ ಎದುರು ಅಭಿಮಾನಿಗಳು ಪಟಾಕಿ  ಸಿಡಿಸಿ ಸಂಭ್ರಮಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಹರ್ಷದಿಂದ ಮಾತನಾಡಿರುವ ಅಭಿಮಾನಿಗಳು ನಮ್ಮ 25 ವರ್ಷಗಳ ಕನಸು ಇದೀಗ ನನಸಾಗಿದೆ. ಎಂಜಿಆರ್ ಸತ್ತಾಗಲೇ ರಜನಿ ರಾಜಕೀಯಕ್ಕೆ ಪ್ರವೇಶ ಮಾಡಬೇಕಿತ್ತು. ಆದರೆ ಅಂದು ಅವರು ಮಾಡಲಿಲ್ಲ. ಬಳಿಕ ಜಯಲಲಿತಾ ಅವರು ರಾಜಕೀಯ ಪ್ರವೇಶವಾಗಿ ಅವರು ಹೆಮ್ಮರವಾಗಿ ಬೆಳೆದರು.
ಆದರೂ ಇದೀಗ ನಮ್ಮ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡಿದ್ದು, ನಮ್ಮ 25 ವರ್ಷಗಳ ಕಾಯುವಿಕೆ ಅಂತ್ಯವಾಗಿದೆ ಎಂದು ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.