ದೇಶ

ಉತ್ತರಪ್ರದೇಶ: ಗೋಹತ್ಯೆ ಆರೋಪ- ಇಬ್ಬರು ಬಾಲಕಿಯರಿಗೆ ಜೈಲುಶಿಕ್ಷೆ

ಗೋಹತ್ಯೆ ಮಾಡಿದ ಆರೋಪ ಕೇಳಿಬಂದ ಹಿನ್ನಲೆಯಲ್ಲಿ 12 ಮತ್ತು 16 ವರ್ಷದ ಇಬ್ಬರು ಬಾಲಕಿಯರನ್ನು ಉತ್ತರಪ್ರದೇಶ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದು, ಬಾಲಕಿಯರಿಗೆ ಜೈಲುಶಿಕ್ಷೆ ವಿಧಿಸಲಾಗಿದೆ ಎಂದು ತಿಳಿದುಬಂದಿದೆ...

ಉತ್ತರಪ್ರದೇಶ: ಗೋಹತ್ಯೆ ಆರೋಪ- ಇಬ್ಬರು ಬಾಲಕಿಯರಿಗೆ ಜೈಲುಶಿಕ್ಷೆ
ಸಾಂದರ್ಭಿಕ ಚಿತ್ರ
Published On :
ಮುಜಾಫರ್'ನಗರ: ಗೋಹತ್ಯೆ ಮಾಡಿದ ಆರೋಪ ಕೇಳಿಬಂದ ಹಿನ್ನಲೆಯಲ್ಲಿ 12 ಮತ್ತು 16 ವರ್ಷದ ಇಬ್ಬರು ಬಾಲಕಿಯರನ್ನು ಉತ್ತರಪ್ರದೇಶ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದು, ಬಾಲಕಿಯರಿಗೆ ಜೈಲುಶಿಕ್ಷೆ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. 
ಬಂಧನಕ್ಕೊಳಗಾಗಿದ್ದ ಬಾಲಕಿಯರನ್ನು ನ್ಯಾಯಾಲಯದ ವಿಚಾರಣೆ ವೇಳೆ ವಯಸ್ಕರಂತೆ ಬಿಂಬಿಸಲಾಗಿದ್ದು, ಬಳಿಕ ಅಪ್ರಾಪ್ತ ಬಾಲಕಿಯರಿಗೆ ಜೈಲುಶಿಕ್ಷೆಯನ್ನು ವಿಧಿಸಲಾಗಿದೆ. ಬಾಲಕಿಯರ ಆಧಾರ್ ಕಾರ್ಡ್ ನಲ್ಲಿ ಅವರ ಜನ್ಮ ದಿನಾಂಕ 2001 ಹಾಗೂ 2005 ಎಂದು ನಮೂದಿಸಲಾಗಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. 
ಗೋಹತ್ಯೆ ಮಾಡಿದ ಆರೋಪ ಸಂಬಂಧ ಉತ್ತರಪ್ರದೇಶದ ಖಟೌಲಿ ಪೊಲೀಸರು ಇಬ್ಬರು ಬಾಲಕಿಯರು, ಮೂವರು ಮಹಿಳೆಯರು ಸೇರಿದಂತೆ ಒಟ್ಟು 9 ಮಂದಿಯನ್ನು ಬಂಧನಕ್ಕೊಳಪಡಿಸಿದ್ದರು. ಮನೆಯೊಂದರಲ್ಲಿ 10 ಕೆಜಿ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದರು ಎಂದು ಪೊಲೀಸರು ಆರೋಪಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯದ ಎದುರು 9 ಮಂದಿಯನ್ನು ಹಾಜರುಪಡಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.